Advertisement

#EducationInTulu ಅಭಿಯಾನಕ್ಕೆ ಜಗ್ಗೇಶ್ ಬೆಂಬಲ: ತುಳು ಭಾಷೆಯಲ್ಲಿ ಟ್ವಿಟ್ ಮಾಡಿದ ನಟ

09:22 AM Aug 16, 2020 | keerthan |

ಮಂಗಳೂರು: ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ಸಿಗಬೇಕು, ತುಳು ಭಾಷೆಯನ್ನು ಕೂಡ ‘ನೂತನ ಶಿಕ್ಷಣ ನೀತಿ-2020’ರಡಿಯಲ್ಲಿ ಸೇರಿಸುವ ಬಗೆಗೆ ಮನವಿ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಗಮನ ಸೆಳೆಯಲು ಜೈ ತುಳುನಾಡು ಸಂಘಟನೆ  ಆಗಸ್ಟ್ 16ರಂದು EducationInTulu ಅನ್ನುವ ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಅಭಿಯಾನ ಆಯೋಜಿಸಿದೆ.

Advertisement

ನೂತನವಾಗಿ ಶಿಫಾರಸ್ಸುಗೊಂಡ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ 5 ಅಥವಾ 8ನೇ ತರಗತಿಯವರೆಗೆ ಸ್ಥಳಿಯ ಅಥವಾ ಮಾತೃಭಾಷೆಯೇ ಬೋಧನ ಮಾಧ್ಯಮವಾಗಿರಬೇಕೆಂಬ ಅಂಶವನ್ನು ಉಲ್ಲೇಖಿಸಲಾಗಿದೆ. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರಿಸಬೇಕೆನ್ನುವ ಒತ್ತಾಯ ಹೆಚ್ಚಿರುವ ಬೆನ್ನಲ್ಲೆ ಈಗ ಶಿಕ್ಷಣದಲ್ಲಿ ತುಳು ಸ್ಥಾನಮಾನ ಬೇಡಿಕೆಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ತುಳು ಭಾಷಿಕ ವಿದ್ಯಾರ್ಥಿಗಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತಾಗಬೇಕು ಎಂದು ಅಭಿಯಾನ ಆರಂಭಿಸಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಅನೇಕ ಮಂದಿ ಈಗಾಗಲೇ #EducationInTulu ಟ್ವೀಟ್ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.

ನಟ ಜಗ್ಗೇಶ್ ಬೆಂಬಲ: ಕನ್ನಡದ ನವರಸ ನಾಯಕ ಜಗ್ಗೇಶ್ ಕೂಡಾ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು, ಟ್ವಿಟ್ ಮಾಡಿದ್ದಾರೆ. ನಾನು ಕೂಡಾ ನಿಮ್ಮೊಂದಿಗೆ ತುಳು ಭಾಷೆ ಅಭಿಯಾನಕ್ಕೆ ಬರುತ್ತೇನೆ ಎಂದು ಜಗ್ಗೇಶ್ ಟ್ವಿಟ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next