Advertisement

ಟ್ವೀಟ್ ವಿವಾದ: ನಟ ಕಮಲ್ ಆರ್ ಖಾನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಪೊಲೀಸರ ವಶಕ್ಕೆ

11:18 AM Aug 30, 2022 | Team Udayavani |

ಮುಂಬೈ:ವಿವಾದಿತ ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನಟ ಕೆಆರ್ ಕೆ ಎಂದೇ ಜನಪ್ರಿಯರಾಗಿದ್ದ ಕಮಲ್ ಆರ್ ಖಾನ್ ಅವರನ್ನು ಮಂಗಳವಾರ (ಆಗಸ್ಟ್ 30) ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಮಳೆಯ ಆರ್ಭಟಕ್ಕೆ ಬೆಚ್ಚಿ ಬಿದ್ದ ಚಿಕ್ಕಬಳ್ಳಾಪುರ ಜನತೆ : ರಾತ್ರಿಯಿಡೀ ನಾಗರಿಕರ ಜಾಗರಣೆ

ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕೆಆರ್ ಕೆಯನ್ನು ಮಂಗಳವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದ್ದು, ಇಂದು ಮುಂಬೈನ ಬೊರಿವಲಿ ಕೋರ್ಟ್ ಗೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, 2020ರ ಸಾಮಾಜಿಕ ಜಾಲತಾಣದಲ್ಲಿನ ವಿವಾದಿತ ಪೋಸ್ಟ್ ಗೆ ಸಂಬಂಧಿಸಿದಂತೆ ಕಮಲ್ ರಶೀದ್ ಖಾನ್ ನನ್ನು ವಶಕ್ಕೆ ಪಡೆಯಲಾಗಿದೆ.

ಉದ್ಯಮಿ, ನಟರೂ ಆಗಿರು ಕಮಲ್ ಆರ್ ಖಾನ್, ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಿನಿಮಾ ವಿಮರ್ಶೆಯ ಯೂಟ್ಯೂಬ್ ಚಾನೆಲ್ ಮೂಲಕ ಭಾರೀ ಜನಪ್ರಿಯತೆ ಗಳಿಸಿದ್ದಾರೆ.

Advertisement

ಸಾಮಾಜಿಕ ಜಾಲತಾಣದಲ್ಲಿ ಬಾಲಿವುಡ್ ನಟರಾದ ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಅಮೀರ್ ಖಾನ್ ವಿರುದ್ಧ ಟೀಕಾಪ್ರಹಾರ ನಡೆಸುವ ಮೂಲಕ ಕೆಆರ್ ಕೆ ಮಾಧ್ಯಮಗಳಲ್ಲಿ ಹೆಚ್ಚು ಸದ್ದು ಮಾಡಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ಗಾಗಿ ಮಲಾಡ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next