Advertisement

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

12:32 PM Oct 01, 2023 | Team Udayavani |

ಬೆಂಗಳೂರು: ಕನ್ನಡ ಚಿತ್ರರಂಗದ ನಟ ನಾಗಭೂಷಣ ಅವರಿದ್ದ ಕಾರು ಶನಿವಾರ ರಾತ್ರಿ ಡಿಕ್ಕಿಯಾಗಿ, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ವಸಂತನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.

Advertisement

ಕೃಷ್ಣ (58) ಹಾಗೂ ಅವರ ಪತ್ನಿ ಪ್ರೇಮಾ (48) ಅವರು ರಾತ್ರಿ ವಾಕಿಂಗ್‌ ಮಾಡುವಾಗ ನಟ ನಾಗಭೂಷಣ ಅವರಿದ್ದ ಕಾರು ಡಿಕ್ಕಿಯಾಗಿದೆ. ಮೊದಲು ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

ಗಂಭೀರವಾಗಿ ಗಾಯಗೊಂಡಿರುವ ಕೃಷ್ಣ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಕೆ.ಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next