Advertisement

Nivin Pauly: ಲೈಂಗಿಕ ದೌರ್ಜನ್ಯ ಪ್ರಕರಣ; ʼಪ್ರೇಮಂʼ ನಟ ನಿವಿನ್‌ ಪೌಲಿಗೆ ಕ್ಲೀನ್‌ ಚಿಟ್  

05:46 PM Nov 06, 2024 | Team Udayavani |

ತಿರುವನಂತಪುರ: ಜಸ್ಟೀಸ್‌ ಕೆ. ಹೇಮಾ ಸಮಿತಿ ವರದಿ (Hema Committee Report) ಬೆನ್ನಲ್ಲೇ ಮಲಯಾಳಂ ಚಿತ್ರರಂಗದ ಹಲವು ಕಲಾವಿದರ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಈ ಪಟ್ಟಿಯಲ್ಲಿ ಮಾಲಿವುಡ್‌ ನಟ “ಪ್ರೇಮಂ’ ಖ್ಯಾತಿಯ ನಿವಿನ್‌ ಪೌಲಿ (Malayalam actor Nivin Pauly) ವಿರುದ್ಧವೂ ದೂರು ದಾಖಲಾಗಿತ್ತು.

Advertisement

ಕೇರಳದ ನೆರಿಯಮಂಗಲಂ ನಿವಾಸಿಯಾಗಿರುವ ದೂರುದಾರೆ ನವೆಂಬರ್ 2023ರಲ್ಲಿ ಸಿನಿಮಾದಲ್ಲಿ ಅವಕಾಶ ನೀಡುತ್ತೇನೆ ಎಂದು ನಿವಿನ್‌ ಪೌಲಿ ತಮ್ಮ ಮೇಲೆ ದುಬೈಯ ಹೊಟೇಲ್‌ ವೊಂದರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ನಿವಿನ್‌ ಸೇರಿ 6  ಮಂದಿಯ ವಿರುದ್ಧ ಮಹಿಳೆ ಆರೋಪ ಮಾಡಿ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ನಿವಿನ್‌ 6ನೇ ಆರೋಪಿ ಆಗಿದ್ದರು. ದೂರು ದಾಖಲಾದ ಬಳಿಕ ʼಪ್ರೇಮಂʼ ನಟ ಆರೋಪಗಳೆಲ್ಲ ಸುಳ್ಳು ಇದೊಂದು ಆಧಾರರಹಿತ ಸುಳ್ಳು ಆರೋಪ. ಸತ್ಯ ಹೊರತರಲು ಯಾವ ಹಂತಕ್ಕೆ ಬೇಕಾದರೆ ಹೋಗುತ್ತೇನೆಂದು ಕಾನೂನು ಹೋರಾಟವನ್ನು ಮಾಡುತ್ತೇನೆ ಎಂದಿದ್ದರು.

ಈ ಸಂಬಂಧ ತನಿಖೆ ನಡೆಸಿದ ಪೊಲೀಸರ ತನಿಖಾ ತಂಡ ಬುಧವಾರ (ನ.6ರಂದು) ಸೂಕ್ತ ಸಾಕ್ಷ್ಯಾಧಾರಗಳಿಲ್ಲದ ಕಾರಣ ಮಲಯಾಳಂ ನಟ ನಿವಿನ್ ಪೌಲಿಗೆ ಕ್ಲೀನ್ ಚಿಟ್ ನೀಡಿದೆ.

Advertisement

ಘಟನೆ ನಡೆದಾಗ ಆ ಸಮಯ ಮತ್ತು ದಿನಾಂಕದಂದು ನಿವಿನ್ ಸ್ಥಳದಲ್ಲಿ ಇರಲಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಇದರ ಪರಿಣಾಮವಾಗಿ, ತನಿಖೆಯ ನೇತೃತ್ವ ವಹಿಸಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಎರ್ನಾಕುಲಂನ ಕೋತಮಂಗಲಂನಲ್ಲಿರುವ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದು, ಪ್ರಕರಣದಲ್ಲಿ ನಿವಿನ್ ಹೆಸರನ್ನು ಆರೋಪಿಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ವರದಿಯಾಗಿದೆ.

ಇನ್ನುಳಿದ ಐವರ ವಿರುದ್ಧ ತನಿಖೆ ಮುಂದುವರೆದಿದೆ ಎಂದು ವರದಿ ತಿಳಿಸಿದೆ.


ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಸಿಕ್ಕ ಬಳಿಕ ನಿವಿನ್‌ ಪೌಲಿ ಕಷ್ಟದ ಸಮಯದಲ್ಲಿ ಜತೆಗಿದ್ದ ಎಲ್ಲರಿಗೂ ಧನ್ಯವಾದವೆಂದು ಪೋಸ್ಟ್‌ ಮಾಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next