Advertisement

ನಟಿ ನೋರಾ ಫತೇಹಿಯನ್ನು 6 ಗಂಟೆಗಳ ಕಾಲ ಪ್ರಶ್ನಿಸಿದ ದೆಹಲಿ ಪೊಲೀಸರು

07:04 PM Sep 15, 2022 | Team Udayavani |

ನವದೆಹಲಿ : ಬಹುಕೋಟಿ ವಂಚನೆಯ ಆರೋಪಿ, ಕಾನ್ಮನ್ ಸುಕೇಶ್ ಚಂದ್ರಶೇಖರ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಬಾಲಿವುಡ್ ನಟಿ ನೋರಾ ಫತೇಹಿ ಅವರನ್ನು ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಗುರುವಾರ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪ್ರಕರಣದಲ್ಲಿ ಆಕೆಯ ಪಾತ್ರಕ್ಕಾಗಿ ದೆಹಲಿ ಪೊಲೀಸರು ಆಕೆಯನ್ನು ವಿಚಾರಣೆಗೆ ಕರೆಸಿರುವುದು ಇದು ಎರಡನೇ ಬಾರಿಯಾಗಿದೆ.

ಇದನ್ನೂ ಓದಿ: ಅಸ್ಸಾಂನ 8 ಬುಡಕಟ್ಟು ಬಂಡುಕೋರ ಗುಂಪುಗಳೊಂದಿಗೆ ಕೇಂದ್ರದ ಐತಿಹಾಸಿಕ ಒಪ್ಪಂದ

ನಟಿ ಜಾಕ್ವೆಲಿನ್ ಫರ್ನಾಂಡಿಸ್, ನೋರಾ ಫತೇಹಿಯನ್ನು ಸುಕೇಶ್ ಚಂದ್ರಶೇಖರ್ ಗೆ ಪರಿಚಯಿಸಿದ ಆರೋಪದಲ್ಲಿ ಪಿಂಕಿ ಇರಾನಿ ಜತೆಗೆ ವಿಚಾರಣೆಗೊಳಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ನೋರಾ ಫತೇಹಿ ಅವರನ್ನು ಈ ಹಿಂದೆ ಜಾರಿ ನಿರ್ದೇಶನಾಲಯ (ಇಡಿ) ಪ್ರಶ್ನಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next