Advertisement

ಪ್ರಶಸ್ತಿ ಪುರಸ್ಕೃತ ಕಲಾವಿದ ಡಾ. ಪಂಚಾಕ್ಷರಪ್ಪ ಹಂಪೋಳ್ ನಿಧನ

12:45 PM Oct 13, 2022 | Team Udayavani |

ದಾವಣಗೆರೆ: ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಚಲನಚಿತ್ರ, ರಂಗಭೂಮಿ ಕಲಾವಿದರಾಗಿದ್ದ ಡಾ. ಪಂಚಾಕ್ಷರಪ್ಪ ಹಂಪೋಳ್ (83) ಗುರುವಾರ ಬೆಳಗಿನ ಜಾವ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ವೈದ್ಯಕೀಯ ವೃತ್ತಿಯ ನಡುವೆಯೂ ರಂಗಭೂಮಿ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಡಾ. ಬಿ.ವಿ. ಕಾರಂತ್ ಇತರ ದಿಗ್ಗಜ ನಿರ್ದೇಶಕರ ನಿರ್ದೇಶನದ ನಾಟಕಗಳಲ್ಲಿ ಅಭಿನಯಿಸಿದ್ದರು. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗೆ ಚಲನಚಿತ್ರಗಳಲ್ಲಿ ನಟಿಸಿದ್ದರು. 2014- 15 ನೇ ಸಾಲಿನಲ್ಲಿ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ಸಂಕ್ರಾಂತಿ ನಾಟಕದ ಉಜ್ಜನ ಪಾತ್ರದ ಮೂಲಕ ಖ್ಯಾತಿ ಪಡೆದಿದ್ದರು.

ದಾವಣಗೆರೆಯ ಪ್ರತಿಷ್ಠಿತ ಬಾಪೂಜಿ ಆಸ್ಪತ್ರೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದರು. ನಿವಾಸಿ ವೈದ್ಯಾಧಿಕಾರಿಯಾಗಿದ್ದ ಅವರು ಇತ್ತೀಚೆಗೆ ನಿವೃತ್ತರಾಗಿದ್ದರು. ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

ಗುರುವಾರ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ದಾವಣಗೆರೆ ನಗರದ ತರಳಬಾಳು ಬಡಾವಣೆಯ ‘ಪ್ರತಿಮಾ’ದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೊನ್ನಾಳಿ ತಾಲೂಕಿನ ಕೋಟೆಹಾಳ್ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next