Advertisement

‘ಡೆವಿಲ್ ಈಸ್ ಬ್ಯಾಕ್’… ಶಸ್ತ್ರ ಚಿಕಿತ್ಸೆ ಬಳಿಕ ನಟ ಪ್ರಕಾಶ್ ರೈ ಟ್ವೀಟ್  

01:26 PM Aug 12, 2021 | Team Udayavani |

ಚಿತ್ರೀಕರಣದ ವೇಳೆ ಗಾಯಗೊಂಡಿದ್ದ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಶೀಘ್ರವೇ ಚಿತ್ರೀಕರಣಕ್ಕೆ ಹಾಜರಾಗುವುದಾಗಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.

Advertisement

ಪ್ರಕಾಶ್ ರೈ ತಮಿಳು ನಟ ಧನುಷ್ ನಟನೆಯ ‘D44’ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಆಗಸ್ಟ್ 10 ರಂದು  ಚೆನ್ನೈನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕೆಳಗೆ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಅಲ್ಲೇ ಸ್ಥಳಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೈದರಾಬಾದ್ ಗೆ ತೆರಳಿದ್ದರು. ಇದೀಗ ಶಸ್ತ್ರ ಚಿಕಿತ್ಸೆ ಮುಗಿದಿದೆ.

ಸರ್ಜರಿ ಬಳಿಕ ಮೊದಲ ಫೋಟೋ ಶೇರ್ ಮಾಡಿರುವ ಪ್ರಕಾಶ್,  “ಡೆವಿಲ್ ಈಸ್ ಬ್ಯಾಕ್. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ನನ್ನ ಆತ್ಮೀಯ ಸ್ನೇಹಿತ ಡಾ.ಗುರುವರೆಡ್ಡಿ ಮತ್ತು ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆಗೆ ಧನ್ಯವಾದಗಳು. ಸದ್ಯದಲ್ಲೇ ಕೆಲಸಕ್ಕೆ ಮರಳುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಇನ್ನು ಆಗಸ್ಟ್ 5 ರಂದು ಧನುಷ್ ನಟನೆಯ ಹೊಸ ಸಿನಿಮಾ ಸೆಟ್ಟೇರಿತ್ತು. ಮಿಥುನ್ ಆರ್ ಜವಾಹರ್ ಈ ಚಿತ್ರ ನಿರ್ದೇಶಿಸುತ್ತಿದ್ದು, ಔಟ್ ಅಂಡ್ ಔಟ್ ಆಕ್ಷನ್ ಸಿನಿಮಾ ಎಂದು ಹೇಳಲಾಗಿದೆ. ಪ್ರಕಾಶ್ ರೈ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಿತ್ಯಾ ಮೆನನ್, ರಾಶಿ ಖನ್ನಾ, ಪ್ರಿಯಾ ಭವಾನಿ ಶಂಕರ್ ಸಹ ಈ ಚಿತ್ರದಲ್ಲಿ ನಟಿಸಲಿದ್ದಾರೆ. ಸನ್ ಪಿಕ್ಚರ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next