ಮಣಿಪಾಲ: ಅತಿರುದ್ರ ಮಹಾಯಾಗದ ಸಿದ್ಧತೆಯಲ್ಲಿರುವ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಅನಂತರ ಅಲ್ಲಿರುವ ಪುಂಗನೂರು ಗೋವುಗಳಿಗೆ ಪೂಜೆ ಸಲ್ಲಿಸಿ ಮುದ್ದಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.
ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿ ಆಶ್ರಯದಲ್ಲಿ ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆ. 22 ರಿಂದ ಮಾ.5ರ ತನಕ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ದೇಗುಲದಲ್ಲಿ ಅತಿರುದ್ರ ಮಹಾಯಾಗ ನಡೆಯಲಿದ್ದು ಸಹಸ್ರಾರು ಭಕ್ತರು ಬರುವ ನಿರೀಕ್ಷೆ ಇದೆ.
ಇದನ್ನೂ ಓದಿ: ಅಂತಾರಾಷ್ಟ್ರೀಯ ಮಾತೃಭಾಷಾ ದಿನದ ವಿಶೇಷ: ಕನ್ನಡದ ಕ್ರಿಯೇಟರ್ ಗೆ ಪ್ರೋತ್ಸಾಹ ನೀಡಿದ ಯೂಟ್ಯೂಬ್