ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಬ್ಬ ಖ್ಯಾತ ಹಾಸ್ಯ ನಟ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಹೌದು ಹಾಸ್ಯ ನಟ ರಂಗಾಯಣ ರಘು ಅವರು ಅಭಿಮಾನಿಗಳ ಒತ್ತಡಕ್ಕೆ ಮಣಿದು ರಾಜಕೀಯ ಪ್ರವೇಶಕ್ಕೆ ಸಿದ್ದರಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಅಭಿಮಾನಿಗಳು ತುಂಬಾ ಒತ್ತಾಯ ಮಾಡಿದ್ದರಿಂದ ರಾಜಕೀಯ ಪ್ರವೇಶಕ್ಕೆ ಮನಸ್ಸು ಮಾಡಿರುವುದಾಗಿ ರಂಗಾಯಣ ರಘು ತಿಳಿಸಿದ್ದಾರೆ. ಏತನ್ಮಧ್ಯೆ ರಂಗಾಯಣ ರಘು ಅವರು ಜೆಡಿಎಸ್ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ.
ನಮ್ಮ ಕುಟುಂಬವೇ ಜೆಡಿಎಸ್ ಜತೆ ಗುರುತಿಸಿಕೊಂಡಿದೆ. ಮಾಜಿ ಪ್ರಧಾನಿಯಾದ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾಕಷ್ಟು ಜನಪರ ಕಾಳಜಿ ಹೊಂದಿದ್ದಾರೆ. ಜಾತ್ಯತೀತ ನಿಲುವನ್ನು ಪಕ್ಷ ಹೊಂದಿದೆ. ಹೀಗಾಗಿ ಜೆಡಿಎಸ್ ಸೇರ್ಪಡೆ ಬಗ್ಗೆ ಒಲವು ತೋರುತ್ತಿರುವುದಕ್ಕೆ ಹೇಳಿದರು.
ಕಳೆದ ಬಾರಿಯೇ ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸಲು ರಘು ಆಕಾಂಕ್ಷೆ ಹೊಂದಿದ್ದರು. ಆ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಗಳ ಜತೆ ಚರ್ಚಿಸಿ ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ಭೇಟಿಯಾಗಿ ಚರ್ಚಿಸುವುದಾಗಿ ರಂಗಾಯಣ ರಘು ತಿಳಿಸಿದ್ದಾರೆ.