Advertisement

ಮುಂಬಯಿ ಪೊಲೀಸ್ ಕಮಿಷನರ್ ಭೇಟಿಯಾದ ನಟ ಸಲ್ಮಾನ್ ಖಾನ್

07:40 PM Jul 22, 2022 | Team Udayavani |

ಮುಂಬಯಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಶುಕ್ರವಾರ ದಕ್ಷಿಣ ಮುಂಬಯಿಯಲ್ಲಿರುವ ಕಚೇರಿಯಲ್ಲಿ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿ ಮಾಡಿದ್ದಾರೆ.

Advertisement

ಕ್ರಾಫರ್ಡ್ ಮಾರುಕಟ್ಟೆ ಎದುರು ಇರುವ ಮುಂಬಯಿ ಪೊಲೀಸ್ ಪ್ರಧಾನ ಕಚೇರಿಗೆ ಸಂಜೆ 4 ಗಂಟೆ ಸುಮಾರಿಗೆ ತಮ್ಮ ಕಾರಿನಲ್ಲಿ ಆಗಮಿಸಿದ ನಟ,  ಫನ್ಸಾಲ್ಕರ್ ಅವರನ್ನು ಭೇಟಿಯಾದರು. ಇದು ಕೇವಲ ಸೌಜನ್ಯದ ಭೇಟಿಯಾಗಿದೆ ಮತ್ತು ಯಾವುದೇ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಲ್ಮಾನ್ ಖಾನ್ ಅಲ್ಲಿ ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ವಿಶ್ವಾಸ್ ನಂಗ್ರೆ ಪಾಟೀಲ್ ಅವರನ್ನು ಭೇಟಿಯಾದರು.

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯ ಬಳಿಕ ಕಳೆದ ತಿಂಗಳು, ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಇಬ್ಬರೂ ಬೆದರಿಕೆ ಪತ್ರವನ್ನು ಸ್ವೀಕರಿಸಿದ್ದರು. ನಂತರ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next