Advertisement

Kannada film industry ಸುರಕ್ಷತೆ: ಸಿಎಂ ಭೇಟಿಯಾದ ನಟಿ ಸಂಜನಾ ಗಲ್ರಾನಿ

05:46 PM Sep 05, 2024 | Team Udayavani |

ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅವರು ಗುರುವಾರ(ಸೆ 5) ರಂದು ಸಿಎಂ ಸಿದ್ದರಾಮಯ್ಯ(Siddaramaiah) ಅವರನ್ನು ಭೇಟಿ ಮಾಡಿ ಕನ್ನಡ ಚಿತ್ರರಂಗದಲ್ಲಿ (Sandalwood ) ಕೆಲಸ ಮಾಡುತ್ತಿರುವವರ ಸುರಕ್ಷತೆಗಾಗಿ ಸಂಘ ರಚಿಸುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.

Advertisement

ಮಾಲಿವುಡ್‌(Mollywood) ಸಿನಿಮಾರಂಗದಲ್ಲಿ ಹೇಮಾ ಸಮಿತಿ ವರದಿ(Hema Committee Report) ಬಳಿಕ ದಿಗ್ಗಜ ಕಲಾವಿದರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಭಾರೀ ಸಡ್ಡು ಮಾಡುತ್ತಿರುವ ಬೆನ್ನಲ್ಲೇ ಟಾಲಿವುಡ್‌, ಕಾಲಿವುಡ್‌ ಹಾಗೂ ಸ್ಯಾಂಡಲ್‌ ವುಡ್‌ನ ಕೆಲ ಕಲಾವಿದರು ಕೂಡ ಹೇಮಾ ಸಮಿತಿಯಂತೆ ತಮ್ಮ ಚಿತ್ರರಂಗದಲ್ಲೂ ಒಂದು ಸಮಿತಿ ರಚನೆ ಆಗಬೇಕೆಂದು ಒಂದಾಗಿ ಧ್ವನಿಗೂಡಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರೆ ಸಮಸ್ಯೆಗಳ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲು ಒಂದು ಸಮಿತಿ ರಚನೆ ಆಗಬೇಕೆಂದು ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ(ಫೈರ್)‌ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದೆ.

Advertisement

ಈ ಪತ್ರಕ್ಕೆ ಅಧ್ಯಕ್ಷೆ ಕವಿತಾ ಲಂಕೇಶ್, ಕಾರ್ಯದರ್ಶಿ ಚೇತನ್ ಅಹಿಂಸಾ, ಹಿಡಿದು ರಮ್ಯಾ, ಶ್ರುತಿ ಹರಿಹರನ್, ಆಶಿಕಾ ರಂಗನಾಥ್, ಐಂದ್ರಿತಾ ರೇ, ಅಮೃತಾ ಅಯ್ಯಂಗಾರ್, ಪೂಜಾ ಗಾಂಧಿ, ಚೈತ್ರಾ ಜೆ ಆಚಾರ್, ಧನ್ಯಾ ರಾಮ್‌ಕುಮಾರ್, ಸಂಯುಕ್ತ ಹೆಗಡೆ, ಶ್ರದ್ಧ ಶ್ರೀನಾಥ್, ಕಿಶೋರ್, ನಿಶ್ವಿಕಾ ನಾಯ್ಡು, ವಿನಯ್ ರಾಜ್‌ಕುಮಾರ್, ಪವನ್‌ ಕುಮಾರ್‌, ನಟ ಸುದೀಪ್ ಸೇರಿದಂತೆ 153 ಮಂದಿ ಅರ್ಜಿಗೆ ಸಹಿ ಹಾಕುವ ಮೂಲಕ ಸಮಿತಿ ರಚನೆಗೆ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next