ಬೆಂಗಳೂರು: ಸ್ಯಾಂಡಲ್ ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ಡಿ ಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ಇಂದು ಬೆಳಗ್ಗೆ ಶಿವರಾಜ್ ಕುಮಾರ್ ಭೇಟಿಯಾದರು.
ಇದನ್ನೂ ಓದಿ:ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ
ಜೆಡಿಎಸ್ ನಲ್ಲಿದ್ದ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಅವರ ಸಹೋದರಿ, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡಾ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿಗಳ ನಡುವೆ ಈ ಭೇಟಿ ಮಹತ್ವ ಪಡೆದಿದೆ. ಪತ್ನಿ ಗೀತಾ ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಬಳಿಗೆ ಚರ್ಚಿಸಲು ಶಿವರಾಜ್ ಕುಮಾರ್ ತೆರಳಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರ ಮುಗಿಸಿ ವಾಪಾಸಾಗುತ್ತಿದ್ದ ಕಮಲ್ ಹಾಸನ್ ಮೇಲೆ ದಾಳಿ!
ಆದರೆ ಈ ಬಗ್ಗೆ ಮಾತನಾಡಿದ ಶಿವರಾಜ್ ಕುಮಾರ್, ನಾನು ರಾಜಕೀಯ ಮಾತನಾಡಲು ಹೋಗಿಲ್ಲ. ಸೌಜನ್ಯದ ಭೇಟಿಯಷ್ಟೇ ಎಂದರು.