ನಟ ಶ್ರೀ ಮುರಳಿ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾವೊಂದು ಘೋಷಣೆಯಾಗಿದೆ. ಚಿತ್ರಕ್ಕೆ “ಪರಾಕ್’ ಎಂದು ಟೈಟಲ್ ಇಡಲಾಗಿದೆ. ನವ ನಿರ್ದೇಶಕ ಹಾಲೇಶ್ ಕೋಗುಂಡಿ ಈ ಚಿತ್ರದ ನಿರ್ದೇಶಕರು.
ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿರುವ ಅನುಭವವಿರುವ ಹಾಲೇಶ್ ಪರಾಕ್ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಆ್ಯಕ್ಷನ್ ಸಸ್ಪೆನ್ಸ್ ಥ್ರಿಲ್ಲರ್ ಜಾನರ್‌ನ ಪರಾಕ್ ಸಿನಿಮಾವನ್ನು ಬ್ರಾಂಡ್ ಕೋ ಆಪರೇಟ್ಸ್ ಪ್ರೊಡಕ್ಷನ್ ಪ್ರೈವೇಟ್ ಲಿಮಿಟೆಡ್‌ನಡಿ ನಿರ್ಮಾಣ ಮಾಡಲಾಗುತ್ತಿದೆ.
ಕೋಗುಂಡಿ ಅಖಿಲೇಶ್ ಹಾಗೂ ಆಶಿಕ್ ಮಾಡಾಲ್ ಸಹ ನಿರ್ಮಾ ಣದ ಜವಾಬ್ದಾರಿ ಹೊತ್ತುಕೊಂಡಿ ದ್ದಾರೆ. ಬಹುತೇಕ ಬೆಣ್ಣೆ ನಗರಿ ದಾವಣಗೆರೆ ಪ್ರತಿಭೆಗಳೇ ಒಂದಾಗಿ ಮಾಡುತ್ತಿರುವ ಪರಾಕ್ ಚಿತ್ರದ ಟೈಟಲ್ ಪೋಸ್ಟರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮೇ ಅಥವಾ ಜೂನ್ ತಿಂಗಳಿನಿಂದ ಪರಾಕ್ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ.
ಭಾನುವಾರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳನ್ನು ಶ್ರೀಮುರಳಿ ಭೇಟಿ ಮಾಡಿದ್ದಾರೆ.