Advertisement

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ನಟಿ ಊರ್ಮಿಳಾ ಮಾತೋಂಡ್ಕರ್ ಶಿವಸೇನೆ ಸೇರ್ಪಡೆ

02:58 PM Dec 01, 2020 | Nagendra Trasi |

ಮುಂಬೈ: ಕಳೆದ ವರ್ಷ ಕಾಂಗ್ರೆಸ್ ಪಕ್ಷದ ಟಿಕೆಟ್ ನಿಂದ ಲೋಕಸಭೆಗೆ ಸ್ಪರ್ಧಿಸಿದ ನಂತರ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಮಂಗಳವಾರ (ಡಿಸೆಂಬರ್ 01, 2020) ಅಧಿಕೃತವಾಗಿ ಶಿವಸೇನಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

Advertisement

ಬಾಂದ್ರಾದ ಮಾತೋಶ್ರೀ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಟಿ ಊರ್ಮಿಳಾ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ವರದಿ ತಿಳಿಸಿದೆ.

ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಊರ್ಮಿಳಾ ಮಾತೋಂಡ್ಕರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.  ಈ ಸಂದರ್ಭದಲ್ಲಿ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್, ಪ್ರಿಯಾಂಕಾ ಚತುರ್ವೇದಿ ಕೂಡಾ ಹಾಜರಿದ್ದರು.

ಊರ್ಮಿಳಾ ಮಾತೋಂಡ್ಕರ್ ಬಹುತೇಕ ರಾಜ್ಯಪಾಲರ ಕೋಟಾದಡಿ ವಿಧಾನಪರಿಷತ್ ಸದಸ್ಯೆಯಾಗಿ ನಾಮನಿರ್ದೇಶನಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಶಿಕ್ಷಣಕ್ಕೆ ಒತ್ತು;ಹರ್ಯಾಣ ಸರ್ಕಾರದಿಂದ 8-12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್

Advertisement

ಕಾಂಗ್ರೆಸ್ ಪಕ್ಷದ ಹಿರಿಯ ಸಹೋದ್ಯೋಗಿ ಸಂಜಯ್ ನಿರುಪಮ್ ವಿರುದ್ಧ ಟೀಕಿಸಿದ್ದ ಊರ್ಮಿಳಾ, ನಿರುಪಮ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಆದರೆ ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಊರ್ಮಿಳಾ 2019ರ ಸೆಪ್ಟೆಂಬರ್ ನಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಊರ್ಮಿಳಾ ಮಾತೋಂಡ್ಕರ್ ಸ್ಪರ್ಧಿಸಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಗೋಪಾಲ್ ಶೆಟ್ಟಿ ಗೆಲುವು ಸಾಧಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next