Advertisement

ನಟ ವಿವೇಕ್ ಒಬೆರಾಯ್ ರಿಗೆ ಭಾರಿ ವಂಚನೆ: ಮೂವರ ವಿರುದ್ಧ ಪ್ರಕರಣ

06:04 PM Jul 21, 2023 | Team Udayavani |

ಮುಂಬಯಿ: ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರಿಗೆ ಮೂವರು ವ್ಯಕ್ತಿಗಳು 1.55 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈವೆಂಟ್ ಮತ್ತು ಚಲನಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಹೂಡಿಕೆ ಮಾಡುವಂತೆ ಕೇಳಿ ಉತ್ತಮ ಆದಾಯದ ಭರವಸೆ ನೀಡಿ ಹಣವನ್ನು ಮೂವರು ತಮಗಾಗಿ ಬಳಸಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

Advertisement

ನಟನ ಚಾರ್ಟರ್ಡ್ ಅಕೌಂಟೆಂಟ್ ಅವರು ಮೂವರ ವಿರುದ್ಧ ಅಂಧೇರಿ ಪೂರ್ವದ ಎಂಐಡಿಸಿ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೂರಿನ ಪ್ರಕಾರ, ಚಲನಚಿತ್ರ ನಿರ್ಮಾಪಕ ಸೇರಿದಂತೆ ಮೂವರು ಆರೋಪಿಗಳು ನಟನ ವ್ಯಾಪಾರ ಪಾಲುದಾರರಾಗಿದ್ದು, ಈವೆಂಟ್ ಮತ್ತು ಚಲನಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಹಣ ಹೂಡುವಂತೆ ಕೇಳಿದ್ದರು. ಈ ಯೋಜನೆಯಲ್ಲಿ ನಟ 1.55 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ ಆದರೆ ಆರೋಪಿಗಳು ಹೂಡಿಕೆ ಮಾಡಿದ ಹಣವನ್ನು ತಮಗಾಗಿ ಬಳಸಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next