Advertisement

ಹೆದರದೇ ಸಿಂಹಕ್ಕೆ ಮಾಂಸ ತಿನ್ನಿಸಿದ ನಟ ಯಶ್ : ವಿಡಿಯೋ ವೈರಲ್

10:21 AM Oct 14, 2021 | Team Udayavani |

ರಾಕಿಂಗ್ ಸ್ಟಾರ್ ಯಶ್ ಇದೀಗ ತುಂಬಾ ಸುದ್ದಿಯಲ್ಲಿರುವ ನಟ. ಸದ್ಯ ರಾಕಿ ಭಾಯ್ ದುಬೈ ಪ್ರವಾಸದಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಜೊತೆ ಯಶ್ ಪ್ರವಾಸವನ್ನು ಎಂಜಾಯ್ ಮಾಡ್ತಾ ಇದ್ದು, ಅಲ್ಲಿನ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಖುಷಿ ನೀಡುತ್ತಿದ್ದಾರೆ.

Advertisement

ಸದ್ಯ ಯಶ್ ಒಂದು ವಿಡಿಯೋವನ್ನು ಶೇರ್ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಯಶ್ ಬರೀ ಸಿನಿಮಾಗಳಲ್ಲಿ ಮಾತ್ರ ಹೀರೋ ಅಲ್ಲ, ನಿಜ ಜೀವನದಲ್ಲೂ ಹೀರೋ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಹೌದು ಸಿಂಹಕ್ಕೆ ಮಾಂಸ ತಿನ್ನಿಸುವ ವಿಡಿಯೋವನ್ನು ಯಶ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ವಿಡಿಯೋದಲ್ಲಿ ಸಿಂಹ ತನ್ನ ಚೂಪಾದ ಹಲ್ಲುಗಳ ಮೂಲಕ ಯಶ್ ತಿನ್ನಿಸುತ್ತಿರುವ ಮಾಂಸವನ್ನು ಕಚ್ಚಿ, ಕಚ್ಚಿ ತಿನ್ನುತ್ತಿರುವುದನ್ನು ಕಾಣಬಹುದಾಗಿದೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ವೀಡಿಯೋ ನೋಡಿ ಅಭಿಮಾನಿಗಳು ಅಚ್ಚರಿಗೊಳ್ಳುವುದರ ಜೊತೆಗೆ ಯಶ್ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next