Advertisement
ಈ ಬಗ್ಗೆ ಇಂದು ತಮ್ಮ ಟ್ವಿಟರ್ ನಲ್ಲಿ ಪತ್ರವೊಂದನ್ನು ಪ್ರಕಟಿಸಿರುವ ರಾಕಿ ಬಾಯ್, ಸಾರಿಗೆ ನೌಕರರ ಬಗ್ಗೆ ತಮ್ಮ ಕಳಕಳಿ ವ್ಯಕ್ತಪಡಿಸಿದ್ದಾರೆ.
Related Articles
Advertisement
‘ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿದೆ.’
‘ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ.’
‘ಸಮಾಧಾನದ ವಿಷಯ ಅಂದ್ರೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ, ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಗಳ ಬಗ್ಗೆ ಇದ್ದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡ್ತು.’ ಎಂದು ದೀರ್ಘವಾಗಿ ಬರೆದಿದ್ದಾರೆ. ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ’.
ಯಶ್ ಅವರು ಸಾಮಾಜಿಕ ಕಳಕಳಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಮುಷ್ಕರ ನಿರತ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಬಲವಾಗಿ ಕೇಳಿ ಬರುತ್ತಿದೆ.