ತೆಕ್ಕಟ್ಟೆ: ಇಂದು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಚಿತ್ರನಟ ಯಶ್ ಆಗಮಿಸಿ ಶ್ರೀ ದೇವರ ದರ್ಶನ ಪಡೆದರು.
ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ, ಧರ್ಮದರ್ಶಿ ಸೂರ್ಯನಾರಾಯಣ ಉಪಾಧ್ಯಾಯ, ಅರ್ಚಕ ಶ್ರೀವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು ಅರ್ಚಕ ಮಂಡಳಿ ಸದಸ್ಯರು, ದೇಗುಲದ ಮ್ಯಾನೇಜರ್ ಹಾಗೂ ಸಿಬ್ಬಂದಿ ವಗ೯ದವರು ಹಾಜರಿದ್ದರು.
ನಿನ್ನೆ ಕೆಜಿಎಫ್ ಸಿನಿಮಾದ ಮ್ಯೂಸಿಕ್ ಗೆ ಫೈನಲ್ ಟಚ್ ನೀಡಲು ನಟ ಯಶ್ ಸಂಗೀತ ನಿರ್ದೇಶನ ರವಿ ಬಸ್ರೂರು ಸ್ಟುಡಿಯೋಗೆ ಭೇಟಿ ಕೊಟ್ಟಿದ್ದರು. ಆ ಬಳಿಕ ಸಂಜೆ ಸ್ಥಳೀಯರೊಂದಿಗೆ ಕ್ರಿಕೆಟ್ ಆಡಿ ಕಾಲ ಕಳೆದಿದ್ದರು.