ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲಗೊಂಡಿದೆ ಎನ್ನುವ ಆರೋಪ ಪ್ರತಿಪಕ್ಷಗಳಿಂದ ಕೇಳಿ ಬರುತ್ತಿದೆ. ಇದೀಗ ವಿರೋಧ ಪಕ್ಷಗಳ ಈ ಆರೋಪ ನಿಜ ಇರಬಹುದು ಎನ್ನುವ ಅನುಮಾನ ಮೂಡಿದೆ. ಇದಕ್ಕೆ ಕಾರಣ ಕನ್ನಡದ ಸಿನಿಮಾ ನಟಿ ಅನು ಪ್ರಭಾಕರ್ ಅವರು ಮಾಡಿರುವ ಒಂದು ಟ್ವಿಟ್
ಟ್ವಿಟ್‍ನಲ್ಲಿ ಏನಿದೆ ?
ಏಪ್ರಿಲ್ 17ರಂದು ನಟಿ ಅನು ಪ್ರಭಾಕರ್ ಗೆ ಕೋವಿಡ್ ಸೋಂಕು ದೃಢಪಟ್ಟಿತು. ಅದಾಗಿ ಐದು ದಿನ ಕಳೆದರೂ ಇನ್ನೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಡೆಯಿಂದ ಪ್ರತಿಕ್ರಿಯೆಯೇ ಬಂದಿಲ್ಲವೆಂದು ಅವರು ಏಪ್ರಿಲ್ 21 ರಂದು ತಮ್ಮ ಟ್ವಿಟ್‍ನಲ್ಲಿ ತಿಳಿಸಿದ್ದಾರೆ.
ಈ ವಿಚಾರವನ್ನು ಆರೋಗ್ಯ ಸಚಿವ ಸುಧಾಕರ್ ಅವರ ಗಮನಕ್ಕೆ ತಂದಿರುವ ಅನು, ಕೋವಿಡ್ ದೃಢಪಟ್ಟು 5 ದಿನವಾಗಿದೆ, ಹೋಂ ಐಸೊಲೇಷನ್ ನಲ್ಲಿದ್ದೇನೆ. ಆದರೆ ಬಿಬಿಎಂಪಿ ಕಡೆಯಿಂದ ಯಾವ ಫೋನ್ ಬಂದಿಲ್ಲ, ಕೋವಿಡ್ ವಾರ್ ವೆಬ್ ಸೈಟ್ ನಲ್ಲಿ ತಮ್ಮ ಹೆಸರು ಅಪ್ಡೇಟ್ ಕೂಡ ಆಗಿಲ್ಲ, ಇನ್ನೂ ನನಗೆ ಬಿಯು ಸಂಖ್ಯೆ ಬಂದಿಲ್ಲ, ಈ ವಿಷಯವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಇಂದು ಕೂಡ ಟ್ವಿಟ್‍ನಲ್ಲಿ ವಿಡಿಯೋ ಶೇರ್ ಮಾಡಿರುವ ಅವರು ಕೋವಿಡ್ ಬಂದರೆ ಏನು ಮಾಡಬೇಕೆಂದು ಹೇಳಿಕೊಂಡಿದ್ದಾರೆ. ನಿಮ್ಮಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡು ಬಂದರೆ ತಕ್ಷಣವೇ ಟೆಸ್ಟ್ ಮಾಡಿಸಿಕೊಳ್ಳಿ ಹಾಗೂ ಹೋಮ್ ಐಸೋಲೇಷನ್‍ಗೆ ಒಳಗಾಗಿ ಎಂದು ಅನುಪ್ರಭಾಕಾರ ಕಿವಿ ಮಾತು ಹೇಳಿದ್ದಾರೆ.