Advertisement

Madhyantara Short Movie: ಮಧ್ಯಂತರ ತಂದ ಖುಷಿ

05:05 PM Oct 02, 2024 | Team Udayavani |

ಇತ್ತೀಚೆಗೆ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಯ ನಾನ್‌ ಫಿಚರ್‌ ವಿಭಾಗದಲ್ಲಿ “ಮಧ್ಯಂತರ’ ಚಿತ್ರಕ್ಕೆ ಪ್ರಶಸ್ತಿ ಬಂದಿರೋದು ನಿಮಗೆ ಗೊತ್ತಿರಬಹುದು. ಈ ಕಿರುಚಿತ್ರವನ್ನು ದಿನೇಶ್‌ ಶೆಣೈ ಅವರು ರಚಿಸಿ, ನಿರ್ದೇಶಿಸಿದ್ದಾರೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ನಡೆಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್‌ ಶೆಣೈ, “ನನಗೂ ಚಿತ್ರರಂಗಕ್ಕೂ ಇಪ್ಪತ್ತೇಳು ವರ್ಷಕ್ಕೂ ಮೀರಿದ ನಂಟು. ಆದರೆ ಈ ಕಥೆ ಹೊಳೆದಿದ್ದು, ಕೊರೊನಾ ಸಮಯದಲ್ಲಿ. ಸಿನಿಮಾ ಮಾಡುವ ಮುನ್ನ ಮೊದಲು ಈ ಕಿರುಚಿತ್ರ ಮಾಡೋಣ ಅಂದುಕೊಂಡೆ. ಇದು ಜನರಿಗೆ ಹಿಡಿಸಿದರೆ, ಮುಂದೆ ಚಲನಚಿತ್ರ ಮಾಡೋಣ. ಆಗ ನಿರ್ಮಾಪಕರು ಸಿಗುತ್ತಾರೆ ಎಂಬ ಉದ್ದೇಶದಿಂದ ಮಾಡಿದೆ. ಈ ಕಿರುಚಿತ್ರವನ್ನು ನೋಡಿದ ದಯಾಳ್‌ ಪದ್ಮನಾಭನ್‌ ಅವರು ಪನೋರಮಾ ಗೆ ಕಳುಹಿಸಲು ಸಲಹೆ ನೀಡಿದರು. ಹಾಗೆ ಡಿಸೆಂಬರ್‌ ಒಳಗೆ ಸೆನ್ಸಾರ್‌ ಮಾಡಿಸಿದರೆ ರಾಷ್ಟ್ರಪ್ರಶಸ್ತಿಗೂ ಕಳುಹಿಸಬಹುದು ಎಂದು ಮತ್ತೂಬ್ಬ ಸ್ನೇಹಿತರು ಹೇಳಿದರು. ಅದೇ ರೀತಿ ಕಳುಹಿಸಲಾಯಿತು. ನಾನ್‌ ಫೀಚರ್‌ ವಿಭಾಗದಲ್ಲಿ ನಮ್ಮ ಮಧ್ಯಂತರಕ್ಕೆ ಎರಡು ಪ್ರಶಸ್ತಿಗಳು ಬಂದಿದೆ. ಈ ಸಮಯದಲ್ಲಿ ನನ್ನ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಇದು 1976ರಿಂದ 85 ರವರೆಗಿನ ಕಾಲಘಟ್ಟದ ಕಥೆ. ಇದನ್ನು ನೆಗೆಟಿವ್‌ ನಲ್ಲೇ ಚಿತ್ರೀಕರಣ ಮಾಡಿದ್ದೇವೆ. ಹನ್ನೊಂದು ದಿನಗಳ ಚಿತ್ರೀಕರಣ ಮಾಡಲಾಗಿದೆ. ನಿರ್ಮಾಪಕ ಮಾಣಿಕ್‌ ಚಂದ್‌ ಅವರು ಸಂದರ್ಶನವೊಂದರಲ್ಲಿ ಹೇಳಿದ ಮಾತೇ ನನ್ನ ಮಧ್ಯಂತರಕ್ಕೆ ಸ್ಪೂರ್ತಿ. ಮುಂದಿನ ದಿನಗಳಲ್ಲಿ ಇದೇ ಕಥೆಯನ್ನು ಮುಂದುವರೆಸಿ ಹಿರಿತೆರೆಯಲ್ಲಿ ಸಿನಿಮಾ ಮಾಡುವ ಪ್ರಯತ್ನ ನಡೆಯುತ್ತಿದೆ’ ಎಂದರು.

ಸಿನಿಮಾ ವೀಕ್ಷಿಸಿ ಮಾತನಾಡಿದ ಹಿರಿಯ ನಟಿ ಜಯಮಾಲ, “ಇಂತಹ ಅದ್ಭುತ ಕಥೆಯನ್ನು ಕೆಲವೇ ನಿಮಿಷಗಳಲ್ಲಿ ಹೇಳುವುದು ಸುಲಭವಲ್ಲ. ದಿನೇಶ್‌ ಶೆಣೈ ಅವರು ಆ ಪ್ರಯತ್ನ ಮಾಡಿದ್ದಾರೆ. ರಾಷ್ಟ್ರಪ್ರಶಸ್ತಿ ಪಡೆದು ಮೊದಲ ಪ್ರಯತ್ನದಲ್ಲೇ ಗೆದ್ದಿದ್ದಾರೆ’ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್‌ ಕೂಡಾ ತಂಡಕ್ಕೆ ಶುಭಕೋರಿದರು.

Advertisement

ಕಿರುಚಿತ್ರದಲ್ಲಿ ನಟಿಸಿರುವ ವೀರೇಶ್‌, ರಮೇಶ್‌ ಪಂಡಿತ್‌, ನಿಖೀತಾ ಮುಂತಾದ ಕಲಾವಿದರು ತಮ್ಮ ಅನುಭವವನ್ನು ಹಂಚಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next