Advertisement

ನಟಿ ಜಯಂತಿ ಆರೋಗ್ಯ ವಿಚಾರಿಸಿದ ನಟರು

06:05 AM Mar 29, 2018 | Team Udayavani |

ಬೆಂಗಳೂರು: ಹಿರಿಯ ನಟಿ ಜಯಂತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅವರಿಗೆ ಅಳವಡಿಸಲಾಗಿದ್ದ ಕೃತಕ ಉಸಿರಾಟದ ವ್ಯವಸ್ಥೆಯನ್ನು ತೆಗೆಯಲಾಗಿದೆ. ಸದ್ಯಕ್ಕೆ ತೀವ್ರ ಚಿಕಿತ್ಸಾ ಘಟಕದಲ್ಲೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಅವರ ಆರೋಗ್ಯ ಚೇತರಿಕೆಯಲ್ಲಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

Advertisement

ಬುಧವಾರ ಬೆಳಗ್ಗೆ  ಚಿತ್ರರಂಗದ ಅನೇಕ ಗಣ್ಯರು ವಿಕ್ರಮ್‌ ಆಸ್ಪತ್ರೆಗೆ ಭೇಟಿ ನೀಡಿ, ಜಯಂತಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಶಿವರಾಜಕುಮಾರ್‌ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಅವರೊಂದಿಗೆ ಮಾತನಾಡಿದ್ದಾರೆ ಎಂದು ಜಯಂತಿ ಅವರ ಪುತ್ರ ಕೃಷ್ಣ ಕುಮಾರ್‌ “ಉದಯವಾಣಿ’ಗೆ ತಿಳಿಸಿದ್ದಾರೆ. 

ಹಿರಿಯ ನಟರಾದ ಶ್ರೀನಿವಾಸ ಮೂರ್ತಿ, ಶ್ರೀನಾಥ್‌, ಹೇಮಾ ಚೌಧರಿ ಸೇರಿದಂತೆ ಇನ್ನೂ ಅನೇಕ ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿ  ಆರೋಗ್ಯ ವಿಚಾರಿಸಿದ್ದಾರೆ. ಕಳೆದ ಎರಡು ದಿನಗಳಿಗೆ ಹೋಲಿಸಿದರೆ, ಬುಧವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಕೃಷ್ಣ ಕುಮಾರ್‌ ಹೇಳಿದ್ದಾರೆ.

ಅಸ್ತಮಾದಿಂದ ಬಳಲುತ್ತಿದ್ದ ಜಯಂತಿ ಅವರು ಭಾನುವಾರ ರಾತ್ರಿ ತೀವ್ರ ಅಸ್ವಸ್ಥಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ನಗರದ ವಿಕ್ರಮ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಸಂಜೆಯ ಹೊತ್ತಿಗೆ ಅವರ ಆರೋಗ್ಯದ ಕುರಿತು ಊಹಾಪೋಹಗಳು ಹರಡಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next