Advertisement

ಕಂದನ ಜೊತೆಗಿನ ಮುದ್ದಾದ ಫೋಟೊ ಹಂಚಿಕೊಂಡ ನಟಿ ಮೇಘನಾ ರಾಜ್

02:45 PM Aug 02, 2021 | Team Udayavani |

ಬೆಂಗಳೂರು: ಸ್ಯಾಂಡಲ್ವುಡ್ ನಟಿ ಮೇಘನಾ ರಾಜ್ ಅವರು ತಮ್ಮ ಮಗ ಜೂನಿಯರ್ ಜೊತೆಗಿನ ಸುಂದರವಾದ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

Advertisement

ನಿನ್ನೆಯಷ್ಟೇ ಗೆಳೆಯರ ದಿನದಂದು ತಮ್ಮ ಪತಿ ದಿ. ಚಿರಂಜೀವಿ ಸರ್ಜಾ ಜೊತೆಗಿನ ಫೋಟೋ ಶೇರ್ ಮಾಡಿಕೊಂಡಿದ್ದರು.  ಇಂದು ತನ್ನ ಕಂದನ ಮುದ್ದಾದ ಪಿಕ್ ಹಂಚಿಕೊಂಡಿದ್ದಾರೆ.

ಈ ಫೋಟೋದಲ್ಲಿ ಮೇಘನಾ ಅವರು ಆಗಷ್ಟೇ ಎದ್ದಿರುವ ತಮ್ಮ ಮಗನನ್ನು ಖುಷಿಯಿಂದ ಅಪ್ಪಿಕೊಂಡಿರುವುದನ್ನು ಕಾಣಬಹುದಾಗಿದೆ. ಇತ್ತ ಜ್ಯೂನಿಯರ್ ಚಿರು ಕೂಡ ಅಮ್ಮನ ಆಲಿಂಗನದಿಂದ ಸಂತಸ ವ್ಯಕ್ತಪಡಿಸಿರುವುದನ್ನು ನೋಡಬಹುದು.

ಮಂಡೇ ಮಾರ್ನಿಂಗ್ಸ್ ಎಂದು ಬರೆದುಕೊಂಡು ಮೇಘನಾ ಮಗನ ಜೊತೆಗೆ ಸೆಲ್ಫಿ ತೆಗೆದುಕೊಂಡು ಅದನ್ನು ತಮ್ಮ ಇನ್ ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಗನ ಜೊತೆಗಿನ ಫೋಟೋ ಶೇರ್ ಮಾಡಿಕೊಳ್ಳುತ್ತಿದ್ದಂತೆಯೇ ಚಿರು ಹಾಗೂ ಮೇಘನಾ ಅಭಿಮಾನಿಗಳು ಕಾಮೆಂಟ್ ಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

ಇನ್ನು ಚಿರಂಜೀವಿ ಸರ್ಜಾ ಅವರು ಇಹಲೋಕ ತ್ಯಜಿಸಿದ್ದರೂ ಮೇಘನಾ ರಾಜ್ ಅವರು ಒಂದಲ್ಲಾ ಒಂದು ರೀತಿಯಲ್ಲಿ ಪತಿಯನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಮೇಘನಾ ಕೆಲವು ದಿನಗಳ ಹಿಂದೆ ಅಭಿಮಾನಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದರು. ವರ್ಷಗಳ ನಂತರ ಕ್ಯಾಮೆರಾ ಎದುರಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದರು. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next