ಕಾಪು : ಕರಾವಳಿಯ ಬೆಡಗಿ, ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಮಂಗಳವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಮಾರಿಯಮ್ಮ ದೇವಿಯ ದರ್ಶನ ಪಡೆದ ಅವರಿಗೆ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಜೀರ್ಣೋದ್ಧಾರ ಕೆಲಸಗಳ ಬಗ್ಗೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ಪದಾಧಿಕಾರಿಗಳು ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ನಾನು ಎಳೆವೆಯಿಂದಲೂ ಮಾರಿಯಮ್ಮ ದೇವಿಯ ಭಕ್ತೆಯಾಗಿದ್ದು ತಾಯಿಯ ಅನುಗ್ರಹದಿಂದಲೇ ಈ ಹಂತದವರೆಗೆ ಬೆಳೆದು ಬಂದಿದ್ದೇನೆ. ನನ್ನ ಏಳಿಗೆಯಲ್ಲಿ ಮಾರಿಯಮ್ಮ ದೇವಿಯ ಅನುಗ್ರಹ ಮುಖ್ಯ ಪಾತ್ರ ವಹಿಸಿದ್ದು, ಮಾರಿಗುಡಿಯ ಸಮಗ್ರ ಜೀರ್ಣೋದ್ದಾರ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಎಸ್. ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ, ಪ್ರಮುಖರಾದ ಮೋಹನ್ ವಿ. ಶೆಟ್ಟಿ, ಲೀಲಾಧರ ಶೆಟ್ಟಿ, ರಘುರಾಮ ಶೆಟ್ಟಿ , ರಮೇಶ್ ಶೆಟ್ಟಿ ಕೊಲ್ಯ, ದಿವಾಕರ ಶೆಟ್ಟಿ ಕಳತ್ತೂರು, ಪೂಜಾ ಹೆಗ್ಡೆ ಅವರ ಸಂಬಂಧಿಕರು ಉಪಸ್ಥಿತರಿದ್ದರು.
Related Articles
ಇದನ್ನೂ ಓದಿ : ರಾಹುಲ್ ಗಾಂಧಿ ವಿಡಿಯೋ ವೈರಲ್: ವಿವಾಹದಲ್ಲಿ ಪಾಲ್ಗೊಳ್ಳುವುದು ಅಪರಾಧವಲ್ಲ; ಕಾಂಗ್ರೆಸ್