Advertisement
ಟ್ವೀಟ್ ನಲ್ಲಿರುವುದಿಷ್ಟು..
Related Articles
Advertisement
ಇದನ್ನೂ ಓದಿ: ಅಪ್ಪು – ದಚ್ಚು ಇಬ್ಬರಿಗೂ ನಾನು ಆತ್ಮೀಯ: ಇಂಥ ಅಗೌರವಕ್ಕೆ ದರ್ಶನ್ ಖಂಡಿತ ಅರ್ಹವಲ್ಲ; ಕಿಚ್ಚ ಸುದೀಪ್
ನಾನು ಯಾವತ್ತಿಗೂ ನಂಬರ್ 1 ಮತ್ತು ಈ ಸ್ಥಾನ ನನಗೆ ಮಾತ್ರ ದಕ್ಕಬೇಕು ಅನ್ನುವ ಅಹಂ ಬಿಟ್ಟು ನಮ್ಮಲ್ಲಿ ಯಾರೇ ಮೇಲೆ ಬಂದರೂ ಅದನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಯಶಸ್ಸು, ಅಧಿಕಾರ, ಹಣ ಯಾವುದು ಶಾಶ್ವತವಲ್ಲ ಅನ್ನುವ ಸಾಮಾನ್ಯ ಅರಿವು ಎಲ್ಲರಿಗೂ ಇರಬೇಕು. ಇಂದು ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳು ತೋರುತ್ತಿರುವ ನಡವಳಿಕೆಬಹಳ ಚಿಂತಾಜನಕವಾಗಿದೆ. ತಮ್ಮ ಗುಂಪಿನಲ್ಲಿ ಅಥವಾ ಬಣದಲ್ಲಿ ಕಾಣಿಸಿಕೊಳ್ಳದ ಎಲ್ಲರನ್ನು ಬಹಳ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ತಾಯಿ, ಹೆಂಡು, ಮಗಳು ಅನ್ನುವ ಎಲ್ಲ ಪವಿತ್ರ ಸಂಬಂಧಗಳಿಗೆ ಮಸಿ ಬಳಿಯುವಂತ ಬಹಳ ಕೆಟ್ಟ ಮಾತುಗಳು ಆಡುವುದನ್ನು ಕಂಡಲ್ಲಿ ನೋವಾಗುತ್ತದೆ. ನಮ್ಮ ಪ್ರಜಾವಂತ ಸಮಾಜ ಯಾವ ಮಟ್ಟಕ್ಕೆ ಇಳಿಯುತ್ತಿದೆ ಅನ್ನುವುದು ನೋಡಿ ಬೇಜಾರಾಗ್ತಿದೆ.
ಮುಂಚಿನಿಂದಲೂ ಅಭಿಮಾನಿ ಸಂಘಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವುದು ನಾವು ಕಂಡಿದ್ದೇವೆ, ಕೇಳಿದ್ದೇವೆ. ರಕ್ತದಾನ ಶಿಬಿರ, ಅನ್ನದಾನ, ವೃದ್ಧಾಶ್ರಮ, ಅನಾಥಾಶ್ರಮದಲ್ಲಿ ಸೇವೆ ಮಾಡುವುದು, ಗಿಡ ನೆಡುವುದು, ಪ್ರಕೃತಿ ಕಾಪಾಡುವುದು, ಬಡವರಿಗೆ ಆಹಾರ ಮತ್ತು ಔಷಧಿ ಹಂಚುವುದು ಮುಂತಾದ ಅನೇಕ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದು ಅಭಿಮಾನಿ ಸಂಘಗಳಿಗೆ ಇರುವ ಹೆಗ್ಗಳಿಕೆ, ಆದರೆ ಅಭಿಮಾನಿಗಳು ಅನ್ನುವ ಹೆಸರಿನಲ್ಲಿ ಈಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನಿಜ ರೂಪವನ್ನು, ಹೆಸರನ್ನು ಹಾಕಿಕೊಳ್ಳದೆ ಅನಾಮಧೇಯವಾಗಿ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯಲ್ಲಿ ಮಾತಾಡುವುದು ವಿಷಾದನೀಯ.
ಇಂತಹ ವರ್ತನೆಯನ್ನು ನಮ್ಮ ನಟರು ಖಂಡಿಸಿ ತಮ್ಮ ಅಭಿಮಾನಿಗಳಿಗೆ ತಿಳವಳಿಕೆ ಹೇಳಿ ಅವರನ್ನು ಸುಸಂಕೃತರಾಗಿ ಮಾಡುವ ಜವಾಬ್ದಾರಿ ಹೊರಬೇಕಿದೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿರೋಧಿ ಚಟವಟಿಕೆಗಳಿಗೆ ಬೆಂಬಲ ಕೊಡಬಾರದು.
ಕನ್ನಡ ಚಿತ್ರರಂಗ ಇವತ್ತು ದೇಶ ವಿದೇಶಗಳಲ್ಲಿ ದೊಡ್ಡ ಖ್ಯಾತಿಪಡೆದಿದೆ . . IMDB ಉನ್ನತ 10 ಚಿತ್ರಗಳ ಪಟ್ಟಿಯಲ್ಲಿ 3 ಕನ್ನಡ ಚಿತ್ರಗಳಿವೆ ಅಂತ ಹೇಳಲು ನಮಗೆಲ್ಲ ಬಹಳ ಹೆಮ್ಮೆ ಆಗಬೇಕಿದೆ. ಕನ್ನಡ ಚಿತ್ರಗಳು ಈ ವರ್ಷ ಕಂಡ ಯಶಸ್ಸು ಬೇರಾವುದೇ ಭಾಷೆಯ ಚಿತ್ರಗಳಿಗೂ ಲಭ್ಯವಾಗಿಲ್ಲ. ಇದಕ್ಕಿಂತ ಹೆಮ್ಮೆಯ ವಿಚಾರ ಮತ್ತು ಸ್ಫೂರ್ತಿ ಬೇಕಿದೆಯೇ?
ಕಲಾದೇವಿಯ ಸೇವೆ ಮಾಡಿಕೊಂಡು ಸಮಾಜಕ್ಕೂ, ನಮ್ಮ ಚಿತ್ರರಂಗಕ್ಕೂ ಒಳ್ಳೆಯ ಹೆಸರು ತರುವುದು ನಮ್ಮೆಲ್ಲರ ಗುರಿ ಆಗಿರಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯೂ ಹೌದು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರನ್ನು ಉತ್ತೇಜಿಸೋಣ. ಪ್ರೀತಿ ಮತ್ತು ವಿಶ್ವಾಸ ತುಂಬಿದ ಉತ್ತಮ ಸಮಾಜ ನಿರ್ಮಿಸೋಣ. ದ್ವೇಷ ಮತ್ತು ಅಸೂಯೆಗಳನ್ನು ದಮನ ಮಾಡೋಣ. ಎಲ್ಲರಿಗು ಒಳಿತಾಗಲಿ.
ಹೊಸಪೇಟೆ ನಟ ದರ್ಶನ್ ಅವರ ಮೇಲೆ ನಡೆದ ಕೃತ್ಯವನ್ನು ರಮ್ಯಾ, ಕಿಚ್ಚ ಸುದೀಪ್, ಶಿವರಾಜ್ ಕುಮಾರ್, ಜಗ್ಗೇಶ್ ಸೇರಿದಂತೆ ಹಲವರು ಖಂಡಿಸಿದ್ದಾರೆ.