Advertisement

ಸಿನಿಮಾಟೋಗ್ರಫಿ ಕಾಯ್ದೆಗೆ ತಿದ್ದುಪಡಿ ವಿರುದ್ಧ ನಟಿ ರಮ್ಯಾ ಆಕ್ರೋಶ

06:20 PM Jul 01, 2021 | Team Udayavani |

ಬೆಂಗಳೂರು: ಸಿನಿಮಾಟೋಗ್ರಫಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ಧ ನಟಿ ರಮ್ಯಾ ಕಿಡಿ ಕಾರಿದ್ದಾರೆ.

Advertisement

‘ನಾವು ನೋಡುವ ವಿಚಾರದಲ್ಲಿ ಸರ್ಕಾರ ಯಾಕೆ ಹಸ್ತಕ್ಷೇಪ ಮಾಡಬೇಕು? ಕೇಂದ್ರದವರು ಎಲ್ಲಾ ಕಡೆ ಇದ್ದಾರೆ. ನಮ್ಮ ಎಲ್ಲಾ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ ಸಿ) ಈಗಾಗಲೇ ಎಲ್ಲವನ್ನು ನಿಯಂತ್ರಣ ಮಾಡುತ್ತಿದೆ” ಎಂದು ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿಯು ಅಂಗೀಕೃತಗೊಂಡರೆ ಸಿಬಿಎಫ್ ಸಿ ನೀಡಿದ ಪ್ರಮಾಣಪತ್ರವನ್ನು ಪ್ರಶ್ನಿಸುವ, ಪುನರ್‌ ಪರಿಶೀಲಿಸುವಂತೆ ಸೂಚಿಸುವ, ಬದಲಾಯಿಸುವಂತೆ ಸೂಚಿಸುವ ಅಧಿಕಾರವನ್ನು ಕೇಂದ್ರ ಸರ್ಕಾರ ಪಡೆದುಕೊಳ್ಳಲಿದೆ. ಹೊಸ ಕಾಯ್ದೆಯನ್ವಯ ಸರ್ಕಾರವೇ ಪರೋಕ್ಷವಾಗಿ ಸಿನಿಮಾಗಳ ಸೆನ್ಸಾರ್ ನಿರ್ಣಯ ಮಾಡಬಹುದಾದ ಹಕ್ಕು ಪಡೆದುಕೊಳ್ಳಲಿದೆ.

ಇನ್ನು ಸರ್ಕಾರದ ಈ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಿನಿಮಾ ರಂಗದ ಹಲವರು ಈಗಾಗಲೇ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಟ ಫರ್ಹಾನ್ ಅಖ್ತರ್, ಅನುರಾಗ್ ಕಶ್ಯಪ್, ಶಬಾನಾ ಅಜ್ಮಿ, ಹನ್ಸಲ್ ಮೆಹ್ತಾ, ದಿಬಾಕರ್ ಬ್ಯಾನರ್ಜಿ, ಜೋಯಾ ಅಖ್ತರ್, ಕಮಲ್ ಹಾಸನ್ ಸೇರಿದಂತೆ ಇನ್ನೂ ಹಲವರು ಸಿನಿಮಾಟೊಗ್ರಫಿ ಕಾಯ್ದೆ 2021 ತಿದ್ದುಪಡಿ ವಿರುದ್ಧ ಬಹಿರಂಗ ಪತ್ರ ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next