Advertisement

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

04:18 PM Jan 08, 2025 | sudhir |

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ನಟಿ ತಾರಾ ಅನುರಾಧಾ, ಕಲಬುರಗಿಯ ವಿಶ್ರಾಂತ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಬಾಳಿ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೂಟಗೋಡಿ ಉತ್ಸವ ರಾಕ್ ಗಾರ್ಡನ್ ಸಮಿತಿ ಅಧ್ಯಕ್ಷೆ ವೇದಾರಾಣಿ ದಾಸನೂರ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.

Advertisement

ನಗರದ ಹೊರವಲಯದಲ್ಲಿರುವ ಮಹಿಳಾ ವಿವಿಯ ಜ್ಞಾನಶಕ್ತಿ ಆವರಣದಲ್ಲಿ ಜ.9ರಂದು ಮಧ್ಯಾಹ್ನ 12.30ಕ್ಕೆ 16ನೇ ಘಟಿಕೋತ್ಸವ ನಡೆಯಲಿದೆ. ಈ ಸಮಾರಂಭದಲ್ಲಿ ಕಲಾಕ್ಷೇತ್ರದ ಸಾಧನೆಗಾಗಿ ವೇದರಾಣಿ, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಮೀನಾಕ್ಷಿ ಬಾಳಿ ಮತ್ತು ಸಿನಿಮಾ ಕ್ಷೇತ್ರದ ಸಾಧನೆಗಾಗಿ ತಾರಾ ಅವರಿಗೆ ವಿವಿಯ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿ ಪ್ರೊ.ಶಶಿಕಲಾ ವಂಜಾರಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಪಾಲ್ಗೊಳ್ಳುವರು. ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ಗರಿಷ್ಠ ಅಂಕ ಗಳಿಸಿ ಒಟ್ಟು 63 ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತದೆ. ಒಟ್ಟು 13,461 ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಘಟಿಕೋತ್ಸವ ಸಂಯೋಜನಾಧಿಕಾರಿ ಪ್ರೊ.ಸಕ್ಪಾಲ್ ಹೂವಣ್ಣ, ಮಾಧ್ಯಮ ಸಮಿತಿ ಅಧ್ಯಕ್ಷ ಪ್ರೊ.ಓಂಕಾರ ಕಾಕಡೆ ಉಪಸ್ಥಿತರಿದ್ದರು.

ಇದನ್ನೂ ಓದಿ: Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Advertisement
Advertisement

Udayavani is now on Telegram. Click here to join our channel and stay updated with the latest news.

Next