ಸುಳ್ಯ: ರಾಮಾಯಣದಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ವಾಲ್ಮೀಕಿ ಜಯಂತಿ ಆಚರಣೆ ಸಾರ್ಥಕವಾದೀತು ಎಂದುಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆ ಅಭಿಪ್ರಾಯಪಟ್ಟರು.
ನಾಡ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಗುರುವಾರ ಸುಳ್ಯ ತಾಲೂಕು ಪಂಚಾಯತ್ ಸಭಾಭವನದಲ್ಲಿ ಜರಗಿದ
ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ವಾಲ್ಮೀಕಿ ಒಬ್ಬ ಬ್ರಹ್ಮಶ್ರೀ ಆತ ರಾಮಾಯಣ ಮಹಾಕಾವ್ಯದಲ್ಲಿ ಒಳ್ಳೆಯ ಜೀವನ ಮೌಲ್ಯದ ಅಂಶಗಳನ್ನು ತಿಳಿಸಿದ್ದು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ವಾಲ್ಮೀಕಿ ಜಯಂತಿ ಆಚರಣೆಗೆ ಅರ್ಥ ಬರುತ್ತದೆ. ಹಿರಿಯರು ಮಕ್ಕಳಿಗೆ ರಾಮಾಯಣವನ್ನು ಓದಲು ಪ್ರೇರೇಪಿಸಬೇಕು ಎಂದು ಕರೆ ನೀಡಿದರು.
ಸುಳ್ಯ ತಾ.ಪಂ. ಅಧ್ಯಕ್ಷೆ ಶುಭದಾ ಎಸ್. ರೈ ಕಾರ್ಯಕ್ರಮ ಉದ್ಘಾಟಿಸಿದರು. ನಾಡಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷ ತಹಶೀಲ್ದಾರ್ ಎಂ.ಎಂ. ಗಣೇಶ್ ಸಭಾಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಮಾಧವ, ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಚಂದ್ರಶೇಖರ್ ಪೇರಾಲ್ ಸ್ವಾಗತಿಸಿ, ವಂದಿಸಿದರು. ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.