Advertisement

ವೀರವನಿತೆಯರ ಸಾಹಸಗಾಥೆ ಪಠ್ಯದಲ್ಲಿ ಅಳವಡಿಕೆ

05:56 PM Mar 01, 2022 | Team Udayavani |

ಹುಬ್ಬಳ್ಳಿ: ಕನ್ನಡನಾಡಿನ ಕೆಳದಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಕಿತ್ತೂರು ಚನ್ನಮ್ಮ, ರಾಣಿ ಅಬ್ಬಕ್ಕ ಸೇರಿದಂತೆ ಅನೇಕ ವೀರವನಿತೆಯರು ನಡೆಸಿದ ಹೋರಾಟ ವಿರೋಚಿತವಾಗಿದೆ. ಈ ಸಾಹಸಗಾಥೆಗಳನ್ನು ಪಠ್ಯದಲ್ಲಿ ಅಳವಡಿಸಿ, ಮುಂದಿನ ಪೀಳಿಗೆಗೆ ಪರಿಚಯಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಬೆಳವಡಿ ಮಲ್ಲಮ್ಮನವರು ಮರಾಠಾ ಸೈನ್ಯದ ವಿರುದ್ಧ ಜಯಗಳಿಸಿದ 374ನೇ ವರ್ಷಾಚರಣೆ ಸ್ಮರಣಾರ್ಥ ಸೋಮವಾರ ಅವರ ಭಾವಚಿತ್ರಕ್ಕೆ ನಗರದ ತಮ್ಮ ನಿವಾಸದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಬೆಳವಡಿ ಮಲ್ಲಮ್ಮ ವಿಜಯದಿನವನ್ನು ಸಾಂಕೇತಿಕವಾಗಿ ಆಚರಿಸಲಾಗಿದೆ.

ಬರುವ ವರ್ಷ ಬೆಳವಡಿ ಗ್ರಾಮದಲ್ಲಿಯೇ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಶಾಸಕ ಅರುಣ ಶಹಪುರ, ವಿಧಾನ ಪರಿಷತ್‌ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ, ಹು-ಧಾ ಪೊಲೀಸ್‌ ಆಯುಕ್ತ ಲಾಭೂರಾಮ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ, ಹುಬ್ಬಳ್ಳಿ ಶಹರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next