Advertisement
ಮಾ.13ರಂದು ಆರೋಗ್ಯಇಲಾಖೆ ಹೊರಡಿಸಿದ ಆದೇಶದಲ್ಲಿ ಮದುವೆ ಸಮಾರಂಭಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಿತ್ತು. ಇದರಿಂದ ಈಗಾಗಲೇ ಕಲ್ಯಾಣಮಂಟಪ, ಪಾರ್ಟಿ ಹಾಲ್, ಹೋಟೆಲ್ ಸೇರಿ ಮದುವೆ ಸಮಾರಂಭಕ್ಕೆ ಬುಕ್ಕಿಂಗ್ ಮಾಡಿಕೊಡಿದ್ದವರಿಗೆ ಕಷ್ಟವಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದವು. ಹೀಗಾಗಿ, ನಿಯಮ ಸಡಿಲಿಸಿರುವ ಪಾಲಿಕೆ ಮದುವೆ ಸಮಾರಂಭದಲ್ಲಿ 100ಕ್ಕಿಂತ ಹೆಚ್ಚಿನ ಜನ ಸೇರದಂತೆ ಮದುವೆ ಕಾರ್ಯಕ್ರಮ ನಡೆಸುವುದಕ್ಕೆ ಅವಕಾಶ ನೀಡಿದೆ.
Related Articles
Advertisement
ಮಾ.13 ರಂದು ಆರೋಗ್ಯ ಇಲಾಖೆ ಹೊರಡಿಸಿದ ಆದೇಶದಲ್ಲಿ ಮದುವೆ ಸಮಾರಂಭಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಸುದ್ದಿಗೋಷ್ಠಿಯಲ್ಲಿ ಸರಳ ವಾಗಿ ಆಚರಣೆ ಮಾಡಿಕೊಳ್ಳುವಂತೆ ಮೌಖೀಕವಾಗಿ ತಿಳಿಸಿದರು. ಇದರಿಂದ ಗೊಂದಲ ವಾತಾವರಣ ಉಂಟಾಗಿತ್ತು.
ಆರೋಗ್ಯ ಇಲಾಖೆಯ ಆದೇಶದಂತೆ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಹಾಗೂ ಪೊಲೀಸರು ಮಾ.14ರ ಶನಿ ವಾರ ನಗರದ ವಿವಿಧ ಕಲ್ಯಾಣ ಮಂಟಪ, ಪಾರ್ಟಿ ಹಾಲ್‌ಗಳಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭ ನಿಲ್ಲಿಸಲು ಹೋಗಿದ್ದರು. ಈ ವೇಳೆ ಸಾರ್ವಜನಿಕರು ಮತ್ತು ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಹೀಗಾಗಿ, ಬಿಬಿಎಂಪಿ ಭಾನುವಾರ ಸ್ಪಷ್ಟನೆ ನೀಡಿದೆ.
ಸಾರ್ವಜನಿಕರು ಸಹಕಾರ ನೀಡಬೇಕು: ಉಳಿದ ಎಲ್ಲ ಕಾರ್ಯಕ್ರಮ ಗಳನ್ನು ಮುಂದೂಡುವುದಕ್ಕೆ ನಗರದ ಸಾರ್ವಜನಿಕರು ಸಹಕಾರ ನೀಡಿದ್ದಾರೆ. ಅದೇ ರೀತಿ ಮದುವೆ ಸಮಾರಂಭದ ವಿಚಾರದಲ್ಲೂ ಸಹಾಕರಿಸಬೇಕು ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರವಿಕುಮಾರ್ ಸುರಪುರ ಮನವಿ ಮಾಡಿದ್ದಾರೆ.