Advertisement

ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸಿ 

12:57 PM Oct 31, 2017 | |

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಮಡಿವಾಳರ ಸಂಘ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಪರಿಶಿಷ್ಟ ಜಾತಿಗೆ ಸೇರಿಸಿ: ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಮೈಸೂರು ಜಿಲ್ಲಾ ಮಡಿವಾಳರ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Advertisement

ರಾಜ್ಯ ಸರ್ಕಾರ ಮಡಿವಾಳ ಸಮುದಾಯದ ಅನುಕೂಲಕ್ಕಾಗಿ ಪೊ›.ಅನ್ನಪೂರ್ಣಮ್ಮ ವರದಿ ಆಧಾರದ ಮೇಲೆ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು, ಮಡಿವಾಳರ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆ,

ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮಡಿವಾಳ ಸಮಾಜದವರಿಗೆ ಸಮುದಾಯ ಭವನ ಮತ್ತು ವಿದ್ಯಾರ್ಥಿನಿಲಯ ಸ್ಥಾಪಿಸಬೇಕು, ಮೈಸೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಕೇಂದ್ರಗಳು, ಗ್ರಾಮಗಳಲ್ಲಿರುವ ಮಡಿಕಟ್ಟೆ ಜಾಗಗಳನ್ನು ಮಡಿವಾಳರಿಗೆ ಮೀಸಲಿಡಬೇಕೆಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ಪ್ರತಿಭಟನಾಕಾರರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ ಬೈರಿ, ಎಂ.ರಾಜು, ಎಸ್‌.ಜೆ.ಪ್ರಶಾಂತ್‌, ಚನ್ನಕೇಶವ, ಬಿ.ರಮೇಶ್‌, ವರುಣ ಮಹದೇವ್‌, ರವಿನಂದನ್‌, ಪುರುಷೋತ್ತಮ, ರಾಮಸ್ವಾಮಿ, ಸಿದ್ದಪ್ಪಾಜಿ ಸೇರಿ ನೂರಾರು ಮಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next