Advertisement

ಹೆಳವ ಸಮಾಜ ಎಸ್ಟಿ ಪಟ್ಟಿಗೆ ಸೇರಿಸಿ

12:56 PM Feb 23, 2020 | Suhan S |

ಬೆಳಗಾವಿ: ಅಲೆಮಾರಿಗಳಾಗಿ ಜೀವನ ನಡೆಸುತ್ತಿರುವ ಹೆಳವಸಮಾಜವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಅಖೀಲ ಕರ್ನಾಟಕ ಹೆಳವ ಸಮಾಜದ ಸದಸ್ಯರು ಶನಿವಾರ ನೀರಾವರಿ ಸಚಿವ ರಮೇಶ ಜಾರಕಿಹೊಳಿ ಆವರಿಗೆ ಮನವಿ ಸಲ್ಲಿಸಿದರು.

Advertisement

ರಾಜ್ಯದಲ್ಲಿ ಸುಮಾರು 30 ಸಾವಿರದಷ್ಟಿರುವ ಅಲೆಮಾರಿ ಹೆಳವ ಸಮಾಜದ ಜನರಿಗೆ ಸರಕಾರದಿಂದ ಸೌಲಭ್ಯ ಸಿಗುತ್ತಿಲ್ಲ. ಸಮಾಜದಲ್ಲಿ ಸಾಕ್ಷರತಾ ಪ್ರಮಾಣವೂ ಬಹಳ ಕಡಿಮೆ. ಆರ್ಥಿಕವಾಗಿ ತೀರಾ ಹಿಂದುಳಿದಿದ್ದೇವೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ನಾವು ಬಹಳ ಶೋಚನೀಯ ಸ್ಥಿತಿಯಲ್ಲಿದ್ದೇವೆ ಎಂದು ಸಮಾಜದ ಮುಖಂಡರು ಹೇಳಿದರು.

ಅಲೆಮಾರಿ ಹೆಳವ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ವರದಿ ಸಿದ್ಧಪಡಿಸಿ ಈಗಾಗಲೇ ಅನುಮೋದನೆಗಾಗಿ ಸರಕಾರಕ್ಕೆ ಸಲ್ಲಿಸಲಾಗಿದೆ. ಕಾರಣ ಇದಕ್ಕೆ ಸಂಪುಟದಲ್ಲಿ ಒಪ್ಪಿಗೆ ಕೊಟ್ಟು ನಮ್ಮನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಮಾಜದ ಪದಾಧಿಕಾರಿಗಳಾದ ಶರಣಪ್ಪ ಬಸಪ್ಪ ಹೆಳವರ, ಮಲ್ಲಿಕಾರ್ಜುನ ಹೆಳವರ, ಅಮೃತ ದಪ್ಪಿನವರ, ಹನುಮಂತ ಗೋಗಿ, ನಿಂಗಪ್ಪ ಹೆಳವರ, ಯಮನಪ್ಪ ಹೆಳವರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next