Advertisement

ಮತದಾರರ ಪಟ್ಟಿಗೆ ಸೇರ್ಪಡೆ

12:14 PM Aug 08, 2020 | Suhan S |

ಶಿಡ್ಲಘಟ್ಟ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಆ.7 ರಂದು ಜಿಲ್ಲಾದ್ಯಂತ ಕರಡು ಮತದಾರರ ಪಟ್ಟಿಗಳನ್ನು ಆಯಾ ತಾಲೂಕಿನ ಪ್ರಮುಖ ಸ್ಥಳಗಳಲ್ಲಿ ಹಾಗೂ ಎಲ್ಲಾ ಮತ ಕೇಂದ್ರಗಳಲ್ಲಿ ಪ್ರಚುರ ಪಡಿಸಲಾಗುತ್ತಿದೆ.

Advertisement

ಸಾರ್ವಜನಿಕರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಗಸ್ಟ್‌ 14ರೊಳಗೆ ಸಲ್ಲಿಸಬೇಕೆಂದು ಉಪವಿ ಭಾಗಾ ಧಿಕಾರಿ ಎ.ಎನ್‌.ರಘುನಂದನ್‌ ತಿಳಿಸಿದ್ದಾರೆ. ಮತದಾರರ ಹೆಸರು ತಾವು ವಾಸವಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಇರದೆ ಬೇರೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ, ಆ ಬಗ್ಗೆ ಆಕ್ಷೇಪಣೆ ಸಲ್ಲಿಸಬಹುದು. ನಗರ ಪ್ರದೇಶದ ಮತದಾರರ ಹೆಸರನ್ನು ಗ್ರಾಮ ಪಂಚಾಯಿತಿಗೆ ತಯಾರಿಸಲಾಗಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ವಿಧಾನಸಭಾ ಕ್ಷೇತ್ರದಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೇ, ಗ್ರಾಮ ಪಂಚಾಯಿತಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಲ್ಲಿ ಮಾತ್ರ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದಿದ್ದಾರೆ. ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿದ್ದು, ಗ್ರಾಪಂ ಕರಡು ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟು ಹೋಗಿದ್ದಲ್ಲಿ ಪರಿಶೀಲಿಸಿ ಕೊಂಡು ಆ.14 ರೊಳಗಾಗಿ ಸಂಬಂಧಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪ ಯೋಗಪಡಿಸಿ ಕೊಂಡು ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ನೋಂದಣಾಧಿಕಾರಿಗಳಿಗೆ, ನಿರ್ದಿಷ್ಟಾಧಿಕಾರಿಗಳಿಗೆ ಸಲ್ಲಿಸ ಬಹುದೆಂದು ಎಸಿ ಎ.ಎನ್‌.ರಘುನಂದನ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next