Advertisement

ಗ್ರಾಮೀಣ ಪ್ರದೇಶಕ್ಕೆ ಹೆಚ್ಚುವರಿ ಬಸ್‌

03:23 PM May 18, 2019 | Team Udayavani |

ಹಾಸನ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್‌ಗಳ ಸಂಚಾರ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಶಾಲಾ ಕಾಲೇಜು ಮಕ್ಕಳಿಗೆ ಹಾಗೂ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಅನುಕೂಲಕ್ಕೆ ಪೂರಕವಾಗಿ ಬಸ್‌ಗಳನ್ನು ಒದಗಿಸುವಂತೆ ಸೂಚನೆ ನೀಡಿದರು.

ಲಾರಿ ಮಾಲೀಕರು ಹಾಗೂ ಆಟೋ ಚಾಲಕರ ಕೋರಿಕೆಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಖಾಸಗಿ ಮ್ಯಾಕ್ಸಿ ಕ್ಯಾಬ್‌ಗಳ ಅನಧಿಕೃತ ಓಡಾಟದ ಬಗ್ಗೆ ನಿಯಂತ್ರಣ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಿಂದ 500 ಮೀಟರ್‌ ಸುತ್ತ ಯಾವುದೇ ಖಾಸಗಿ ಸಾರಿಗೆ ವಾಹನಗಳ ನಿಲುಗಡೆಗೆ ಅವಕಾಶ ನೀಡಬಾರದು ಎಂದು ತಿಳಿಸಿದ ಅವರು, ಆಟೋಗಳಲ್ಲಿ ಕಡ್ಡಾಯವಾಗಿ ಮೀಟರ್‌ ಅಳವಡಿಸಿಕೆ ಹಾಗೂ ರೈಲ್ವೆ ನಿಲ್ದಾಣ ಹಾಗೂ ಬಸ್‌ ನಿಲ್ದಾಣಗಳಿಂದ ಪ್ರೀಪೇಡ್‌ ಆಟೋ ಸೇವೆ ಪ್ರಾರಂಭಿ ಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳ ಸಹಕಾರ ಪಡೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಚೇತನ್‌ಸಿಂಗ್‌ ರಾಥೋಡ್‌ ಮಾತನಾಡಿದರು. ಅಪರ ಪೊಲೀಸ್‌ ವರಿಷ್ಠಾಧಿಕಾರಿ ನಂದಿನಿ, ಅಪರ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಅಶೋಕ್‌ ಕುಮಾರ್‌, ಕೆ.ಎಸ್‌.ಆರ್‌.ಟಿ.ಸಿ ಹಾಸನ ವಿಭಾಗೀಯ ನಿಯಂತ್ರಣಾಧಿಕಾರಿ ಕಮಲ್ ಕುಮಾರ್‌, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್‌ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next