Advertisement

ಕರ್ನಾಟಕದ ಕೇಂದ್ರ ವಿವಿಗೆ ಹೆಚ್ಚುವರಿ ಅನುದಾನ

01:05 AM Jan 17, 2019 | Team Udayavani |

ನವದೆಹಲಿ: ಕರ್ನಾಟಕದ ಕಲಬುರಗಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯ ಸೇರಿದಂತೆ ದೇಶದ 13 ಕೇಂದ್ರೀಯ ವಿವಿಗಳಿಗೆ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 3639.2 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಲಾಗಿದೆ.

Advertisement

ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ 36 ತಿಂಗಳೊಳಗೆ ಕ್ಯಾಂಪಸ್‌ ಮೂಲಸೌಕರ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಈಗಾಗಲೇ ಇದಕ್ಕಾಗಿ 1474.65 ಕೋಟಿ ರೂ. ನೀಡಲಾಗಿದ್ದು, ಇದಕ್ಕೆ ಹೆಚ್ಚುವರಿಯಾಗಿ ಕೇಂದ್ರ ಈ ಮೊತ್ತವನ್ನು ನೀಡಲಿದೆ.

ಬಿಹಾರ, ಗುಜರಾತ್‌, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ, ಕೇರಳ, ಒಡಿಶಾ, ಪಂಜಾಬ್‌, ರಾಜಸ್ಥಾನ ಮತ್ತು ತಮಿಳುನಾಡಿನಲ್ಲಿ ತಲಾ ಒಂದು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ವಿವಿಗಳಿಗೆ ಈ ಅನುದಾನ
ಲಭ್ಯವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next