Advertisement

School: ನ.23ರಿಂದ ಶಾಲಾ ಮಕ್ಕಳಿಗೆ ಮತ್ತಷ್ಟು ಪೌಷ್ಟಿಕಾಹಾರ‌: ಮಧು

11:07 PM Oct 27, 2023 | Team Udayavani |

ಶಿವಮೊಗ್ಗ: ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಬಿಸಿಯೂಟ, ಹಾಲು, ಮೊಟ್ಟೆ ಜತೆಗೆ ನ.23ರಿಂದಲೇ ಅನ್ವಯಗೊಳ್ಳುವಂತೆ ಮತ್ತಷ್ಟು ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸಲು ಉದ್ದೇಶಿಸಲಾಗಿದೆ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಮಕ್ಕಳ ಪುಸ್ತಕ ಹೊರೆ ಯನ್ನು ಇಳಿಸಲು ಉದ್ದೇಶಿಸ ಲಾಗಿದ್ದು, ಈ ಸಂಬಂಧ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸ ಲಾಗಿದೆ. ಮುಂದಿನ ವರ್ಷದಿಂದಲೇ ಅನ್ವಯಗೊಳ್ಳುವಂತೆ ಈ ಕಾರ್ಯ ವನ್ನು ಅನುಷ್ಠಾನಗೊಳಿಸಲಾಗು ವುದು. ರಾಜ್ಯದ ಶಾಲೆಗಳ ನಿರ್ವಹಣೆಗೆ ಪ್ರತಿ ವರ್ಷ ನೀಡಲಾಗುತ್ತಿದ್ದ 10 ಸಾವಿರ ರೂ. ಅನುದಾನವನ್ನು 20 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದನ್ನು ಇನ್ನಷ್ಟು ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಅನುದಾನವನ್ನು ಬಳಸಿ, ಶಾಲಾ ಸ್ವತ್ಛತೆ ಹಾಗೂ ಶೌಚಾಲಯಗಳ ನಿರ್ವಹಣೆಗೆ ಶಾಲಾ ಮುಖ್ಯ ಶಿಕ್ಷಕರು ಗಮನಹರಿಸಬೇಕು ಎಂದರು.

ಈಗಾಗಲೇ 13,000 ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಉಳಿದ 4,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿ ಸಿ ಅ.30ರಂದು ನ್ಯಾಯಾಲಯದ ಆದೇಶದ ಬಳಿಕ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಕರ ನೇಮಕಾತಿಯಲ್ಲಿ ಮೀಸಲಾತಿ ಅನುಸರಿಸುವ ನಿಟ್ಟಿನಲ್ಲಿ ಮುಂದಿನ ಸಾಲಿನಲ್ಲಿ 15,000 ಕಲಾ ಮತ್ತು ಸಂಗೀತ ಮತ್ತಿತರ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next