Advertisement
ಸುಭದ್ರಾ ಸಭಾಂಗಣದಲ್ಲಿ ಗುರುವಾರ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್ ವ್ಯಾಪ್ತಿಯ ಬೂತ್ಪ್ರತಿನಿಧಿಗಳ ತರಬೇತಿ ಕಾರ್ಯಾಗಾರವನ್ನು ಅವರು ಉದ್ಘಾಟಿಸಿದರು. ರಾಜ್ಯ ಸರಕಾರದ ಸಾಧನಾ ಸಮಾವೇಶಕ್ಕೆ ಪುತ್ತೂರಿನಲ್ಲಿ ದಾಖಲೆಯ ಜನಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿ ಯಶಸ್ವಿಗೊಳಿಸಿದ್ದಾರೆ. ಇದಕ್ಕೆಲ್ಲ ಕಾರ್ಯಕರ್ತರು ಪಕ್ಷದ ಮೇಲಿಟ್ಟಿರುವ ಪ್ರೀತಿಯೇ ಕಾರಣ. ನಮ್ಮಲ್ಲೇ ಚಿಂತನೆ ನಡೆಸಿ ಸೂಕ್ತ ಅಭ್ಯರ್ಥಿಯನ್ನು ಚುನಾಯಿಸಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.
Related Articles
Advertisement
ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಎಐಸಿಸಿ ನಿರ್ದೇಶನದಂತೆ ಬೂತ್ ಮಟ್ಟದ ಪ್ರತಿನಿಧಿಗಳ ತರಬೇತಿಯನ್ನು ಆಯೋಜಿಸಲಾಗಿದೆ. ಬೂತ್ ಬಲವರ್ಧನೆ, ರಾಜ್ಯ ಸರಕಾರದ ಸಾಧನೆ, ಪ್ರಣಾಳಿಕೆಗಳನ್ನು ಹಾಗೂ ಕೇಂದ್ರ ಸರಕಾರ ವೈಫಲ್ಯಗಳನ್ನು ತಿಳಿಸುವ ನಿಟ್ಟಿನಲ್ಲಿ ತರಬೇತಿ ನಡೆಯಲಿದೆ ಎಂದು ಹೇಳಿದರು.ಕೃಷ್ಣಪ್ರಸಾದ್ ಆಳ್ವ ವಂದಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಲ ರಾಮಚಂದ್ರ ಕಾರ್ಯಕ್ರಮ ನಿರ್ವಹಿಸಿದರು. ಅನಂತರ ಸಂಪನ್ಮೂಲ ವ್ಯಕ್ತಿಗಳಿಮದ ತರಬೇತಿ ನಡೆಯಿತು.
ಸಭೆಯಲ್ಲಿ ಗೊಂದಲಉಸ್ತುವಾರಿ ಸಚಿವ ಬಿ. ರಮಾನಾಥ ರೈ ಭಾಗವಹಿಸುವ ನಿರೀಕ್ಷೆ ಇದ್ದರೂ ಅವರು ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ.
ತರಬೇತಿ ಉದ್ಘಾಟನೆಯ ವೇಳೆ ತಾ.ಪಂ. ಮಾಜಿ ಸದಸ್ಯ ಬೂಡಿಯಾರು ಪುರುಷೋತ್ತಮ ರೈ ಅವರು ವೇದಿಕೆ
ಮುಂಭಾಗಕ್ಕೆ ಬಂದು, ತಮ್ಮ ಬೂತ್ ವ್ಯಾಪ್ತಿಯ ಲೋಪಗಳನ್ನು ಸರಿಪಡಿಸುವಂತೆ ಕೇಳಿಕೊಂಡರು. ಅವರನ್ನು ಸಮಾಧಾನಿಸಿದರೂ ಸ್ವಲ್ಪ ಹೊತ್ತಿನ ಬಳಿಕ ಮತ್ತೆ ವೇದಿಕೆ ಬಳಿ ಬಂದು ವಿಷಯ ಪ್ರಸ್ತಾಪಿಸಿದಾಗ ಸಭಾಂಗಣದಲ್ಲಿ ಗೊಂದಲ, ಮಾತಿನ ಚಕಮುಕಿ ನಡೆಯಿತು.