Advertisement

ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಸಮರ್ಪಕ ಅನುಷ್ಠಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

08:50 PM Dec 02, 2022 | Team Udayavani |

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ರೂಪಿಸಿರುವ ಎಸ್‌ಸಿಪಿ-ಟಿಎಸ್‌ಪಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು 35 ಇಲಾಖೆಗಳ ನೋಡಲ್‌ ಏಜೆನ್ಸಿ ಸಭೆ ನಡೆಸಿದ್ದು, ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಂಡಿವೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Advertisement

ಇಲಾಖಾ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾತನಾಡಿದ ಅವರು, ಕಳೆದ ವರ್ಷಗಳಂತೆ ಈ ಬಾರಿಯೂ ಪ್ರಗತಿ ಸಾಧಿಸಲಾಗಿದ್ದು, ಹಿನ್ನಡೆಯಾಗಲು ಬಿಡುವುದಿಲ್ಲ ಎಂದು ಹೇಳಿದರು.

ಎಸ್‌ಸಿಪಿ ಅಡಿ 2022-23ನೇ ಸಾಲಿನಲ್ಲಿ 20,843.03 ಕೋಟಿ ರೂ. ಹಂಚಿಕೆ ಮಾಡಿದ್ದು, ನ.29ರ ವರೆಗೆ 9,298.54 ಕೋಟಿ ರೂ., ಅಂದರೆ ಶೇ.45ರಷ್ಟು ಪ್ರಗತಿಯಾಗಿದೆ. ಟಿಎಸ್‌ಪಿ ಅಡಿ 8,322.78 ಕೋಟಿ ರೂ. ಹಂಚಿಕೆಯಾಗಿದ್ದು, 2,928.46 ಕೋ. ರೂ. ಅಂದರೆ ಶೇ.35 ಪ್ರಗತಿಯಾಗಿದೆ ಎಂದು ತಿಳಿಸಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ನಿಯಮಿತವಾಗಿ ನೋಡಲ್‌ ಏಜೆನ್ಸಿ ಸಭೆಯನ್ನು ನಡೆಸುತ್ತಿದ್ದು, ಅನುಷ್ಠಾನಾಧಿಕಾರಿಗಳಾದ 35 ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳೊಂದಿಗೆ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲಿಸಲಾಗುತ್ತದೆ. ಕಾರ್ಯಕ್ರಮಗಳ ಅನುಷ್ಠಾನದ ಪರಿಣಾಮ ಮತ್ತು ಗುಣಮಟ್ಟದ ಬಗ್ಗೆ ಸಾಮಾಜಿಕ ಪರಿಶೋಧನೆ ಮತ್ತು ಮೌಲ್ಯಮಾಪನವನ್ನು ಮಾಡಿಸಲಾಗುತ್ತಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next