Advertisement

Mangaluru ಆಯುಷ್ಮಾನ್‌ ಯೋಜನೆಯಡಿ ಸಮರ್ಪಕ ಸೇವೆ: ಡಿಸಿ ಸೂಚನೆ

11:21 PM Dec 04, 2023 | Team Udayavani |

ಮಂಗಳೂರು: ಆಸ್ಪತ್ರೆಗಳು ಆಯುಷ್ಮಾನ್‌ ಯೋಜನೆಯಡಿ ರೋಗಿಗಳಿಗೆ ಸಮರ್ಪಕ ಸೇವೆ ನೀಡಬೇಕು. ಯಾವುದೇ ದೂರು ಬಾರದಂತೆ ರೋಗಿಗಳೊಂದಿಗೆ ವ್ಯವಹರಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ಸೂಚಿಸಿದ್ದಾರೆ.

Advertisement

ಸೋಮವಾರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಆಯುಷ್ಮಾನ್‌ ಯೋಜನೆಯ ಜಿಲ್ಲಾ ಕುಂದು ಕೊರತೆ ನಿವಾರಣ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಜಿಲ್ಲೆಯಲ್ಲಿ ರೋಗಿಗಳಿಂದ ಖಾಸಗಿ ಆಸ್ಪತ್ರೆಗಳು ನಿಗದಿತ ಸೌಲಭ್ಯ ಕೊಡದಿರುವ ಬಗ್ಗೆ ಹಾಗೂ ಹೆಚ್ಚುವರಿ ಮೊತ್ತ ಪಾವತಿಸಿರುವ ಬಗ್ಗೆ ಮಾರ್ಚ್‌ ತಿಂಗಳಿನಿಂದ ಒಟ್ಟು 16 ದೂರುಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದರು.

ಆಯುಷ್ಮಾನ್‌ ಯೋಜನೆಯಡಿ ದಾಖಲಾದ ರೋಗಿಗಳಿಗೆ ಯೋಜನೆ ಯಡಿ ಬರುವ ಎಲ್ಲ ಸೌಲಭ್ಯಗಳನ್ನು ಆಸ್ಪತ್ರೆಗಳು ಒದಗಿಸಲೇಬೇಕು. ಅದೇ ರೀತಿ ಸರಕಾರ ನಿಗದಿಪಡಿಸಿದ ಮೊತ್ತವನ್ನೇ ಪಡೆಯಬೇಕು. ಹೆಚ್ಚುವರಿ ಮೊತ್ತ ಪಡೆಯುವಂತಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ತಿಳಿಸಿದರು.

16 ದೂರುಗಳಲ್ಲಿ 9 ಪ್ರಕರಣವನ್ನು ಜಿಲ್ಲಾ ಆರೋಗ್ಯಾಧಿಕಾರಿ ಹಂತದಲ್ಲಿ ಇತ್ಯರ್ಥ ಮಾಡಲಾಗಿದೆ ಎಂದು ತಿಳಿಸಿದರು.

Advertisement

ಅಪರ ಜಿಲ್ಲಾಧಿಕಾರಿ ಡಾ| ಜಿ. ಸಂತೋಷ್‌ ಕುಮಾರ್‌, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಮುಕುಲ್‌ ಜೈನ್‌, ಆಯುಷ್ಮಾನ್‌ ಭಾರತ್‌ ನೋಡಲ್‌ ಅಧಿಕಾರಿ ಡಾ| ಸುದರ್ಶನ್‌, ಪ್ರಾದೇಶಿಕ ಸಮನ್ವಯ ಅಧಿಕಾರಿಗಳಾದ ಡಾ| ಯಶಸ್ವಿನಿ, ಡಾ| ನೌಷಾದ್‌ ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next