Advertisement

ಸ್ಯಾಂಟ್ರೊ ರವಿ ಬಂಧನಕ್ಕೆ ತಂಡ ರಚನೆ, ಲುಕ್ ಔಟ್ ನೋಟಿಸ್ ಜಾರಿ: ಎಡಿಜಿಪಿ ಅಲೋಕ್ ಕುಮಾರ್

08:09 PM Jan 10, 2023 | Team Udayavani |

ಮೈಸೂರು: ತಲೆ ಮರೆಸಿಕೊಂಡಿರುವ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿ ಬಂಧನಕ್ಕೆ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

Advertisement

ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ರವಿ ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರವಿ ವಿರುದ್ದ ಮೈಸೂರು ನಗರದ ವಿಜಯನಗರ ಠಾಣೆಯಲ್ಲಿ ಅತ್ಯಾಚಾರ ಮತ್ತು ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ತಲೆ ಮರೆಸಿಕೊಂಡಿರುವ ಆತನ ಪತ್ತೆಗೆ ಮಂಡ್ಯ, ರಾಮನಗರ, ಮೈಸೂರು, ಬೆಂಗಳೂರು, ಗ್ರಾಮಾಂತರ ಜಿಲ್ಲೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಹೇಳಿದರು.

ಬೆಂಗಳೂರಿನ ರಾಜರಾಜೇಶ್ವರಿ ನಗರದ ಆತನ ಮನೆಯಲ್ಲಿ ಶೋಧ ನಡೆಸಿದ್ದೇವೆ. ಬ್ಯಾಂಕ್ ಖಾತೆ, ಲಾಕರ್ ಮಾಹಿತಿ ಸಂಗ್ರಹಿಸಲಾಗಿದೆ ಎಂದರು.
ಆರೋಪಿ ಹೊರದೇಶಕ್ಕೆ ತೆರಳುವ ಸಾಧ್ಯತೆಯಿರುವುದರಿಂದ ಲುಕ್‌ಔಟ್ ನೋಟಿಸ್ ನೀಡಿದ್ದು, ಪ್ರಕರಣದ ತನಿಖೆಯಲ್ಲಿ ಯಾವುದೇ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದರು.

ಬ್ಯಾಂಕ್ ಖಾತೆ ಮುಟ್ಟುಗೋಲು: ರವಿ ಅಕ್ರಮವಾಗಿ ಹಣ ಸಂಪಾದನೆ ಮಾಡಿರುವ ಕುರಿತಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯಡಿ ವಿಚಾರಣೆ ನಡೆಸಲಿದ್ದು, ಬ್ಯಾಂಕ್ ಖಾತೆಗೆ ಮುಟ್ಟುಗೋಲಿಗೆ ಕ್ರಮ ವಹಿಸಲಾಗುವುದು ಎಂದರು.

ಹೇಳಿಕೆ ದಾಖಲು: ದೂರು ನೀಡಿದ ಸಂತ್ರಸ್ತೆ ಮತ್ತು ಆಕೆಯ ಸೋದರಿಯ ಹೇಳಿಕೆಯನ್ನು ಐಪಿಸಿ ಕಲಂ 164 ರಡಿ ದಾಖಲಿಸಲಾಗಿದೆ. ಯಾವುದೇ ಲೋಪವಾಗದಂತೆ ತನಿಖೆ ನಡೆಸಲಾಗುವುದು ಎಂದು ಹೇಳಿದರು.

Advertisement

ಇದನ್ನೂ ಓದಿ: ಆಗಸದಲ್ಲಿ ಸಂಚರಿಸುತ್ತಿರುವಾಗಲೇ ವಿಮಾನದ ಬಾಗಿಲು ಓಪನ್‌! ಮುಂದೇನಾಯ್ತು…

Advertisement

Udayavani is now on Telegram. Click here to join our channel and stay updated with the latest news.

Next