Advertisement

ಪದೇ ಪದೇ ಜಾಗ ಬದಲಾಯಿಸುತ್ತಿದ್ದ ಪ್ರವೀಣ್ ಹಂತಕರು : ಆರೋಪಿಗಳ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

01:24 PM Aug 11, 2022 | Team Udayavani |

ಮಂಗಳೂರು : ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಸಂಬಂಧಿಸಿ ಸುಳ್ಯದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಬಂಧಿತರು ಶಿಯಾಬುದ್ದೀನ್ ಅಲಿ(33), ರಿಯಾಜ್(27) ಹಾಗೂ ಎಲಿಮಲೆಯ ಬಶೀರ್(29) ಎನ್ನಲಾಗಿದೆ.

ಪ್ರಕರಣದ ಕುರಿತು ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಮೂವರು ಪದೇ ಪದೇ ತಮ್ಮ ವಾಸ ಸ್ಥಾನವನ್ನು ಬಳಲಿಸಿಕೊಳ್ಳುತ್ತಿದ್ದರು ಅಲ್ಲದೆ ಅವರ ಶೋಧ ಕಾರ್ಯಕ್ಕೆ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು, ಖಚಿತ ಮಾಹಿತಿ ಪಡೆದುಕೊಂಡ ಪೋಲೀಸರ ತಂಡ ಇಂದು(ಗುರುವಾರ) ಆರೋಪಿಗಳನ್ನು ತಲಪಾಡಿಯ ಬಳಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ವಶಕ್ಕೆ ಪಡೆಯಲಾಗುವುದು, ಮಹಜರು, ಕೊಲೆಯಲ್ಲಿ ಬಳಸಿದ ವಾಹನ, ಆಯುಧಗಳನ್ನು ವಶಕ್ಕೆ ಪಡೆದ ಬಳಿಕ ಎನ್ಐಎಗೆ ಈ ಪ್ರಕರಣದ ತನಿಖೆಯನ್ನು ಹಸ್ತಾಂತರ ಮಾಡಲಾಗುವುದು ಎಂದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿಯಾದವರ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ.

Advertisement

ಇದನ್ನೂ ಓದಿ : ಮಧುಗಿರಿ : ಅರುಂಧತಿ ಸಿನಿಮಾ ನೋಡಿ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ಯುವಕ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next