ರಾಮನಗರ: ಮೇಕೆದಾಟು ಪಾದಯಾತ್ರೆಯ ಭವಿಷ್ಯ ಇನ್ನು ಕೆಲವೇ ಗಂಟೆಗಳಲ್ಲಿ ನಿರ್ಧಾರವಾಗುವ ಸಾಧ್ಯತೆಯಿದೆ. ಮೇಕೆದಾಟು ಪಾದಯಾತ್ರೆ ವಿಚಾರದಲ್ಲಿ ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೇ ರಾಜ್ಯ ಸರ್ಕಾರ ಯಾತ್ರೆಗೆ ನಿರ್ಬಂಧ ಹೇರಿದೆ. ಆದರೆ ಪಾದಯಾತ್ರೆ ಮುಂದುವರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ರಾಮನಗರದಲ್ಲಿ ಸೇರಿದ್ದು, ಪೊಲೀಸರು ಬಿಗು ಬಂದೋಬಸ್ತ್ ಮಾಡಿದ್ದಾರೆ.
ಎಡಿಜಿಪಿ ಪ್ರತಾಪ್ ರೆಡ್ಡಿ ಮತ್ತು ಎಸ್ ಪಿ ಎಸ್.ಗಿರೀಶ್ ಅವರು ಆಗಮಿಸಿ, “ಸರ್ಕಾರ ಪಾದಯಾತ್ರೆಗೆ ಅವಕಾಶ ನೀಡಿಲ್ಲ. ಹಾಗಾಗಿ ಪಾದಯಾತ್ರೆ ಮೊಟಕುಗೊಳಿಸಿ ಇಲ್ಲವೇ ಕಾನೂನು ಕ್ರಮ ಅನಿವಾರ್ಯ ಎಂದು ಸಿದ್ದರಾಮಯ್ಯಗೆ ಸೂಚನೆ ಕೊಟ್ಟು ತೆರಳಿದ್ದಾರೆ.
ಹೀಗಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ಪಕ್ಷದ ನಾಯಕರ ಸಭೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು ಪಾದಯಾತ್ರೆ ಮುಂದುವರೆಸುವ ಅಥವಾ ಮೊಟಕುಗೊಳಿಸುವ ಬಗ್ಗೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಮದು ವರದಿಯಾಗಿದೆ.
ಇದನ್ನೂ ಓದಿ:ಐದನೇ ದಿನದ ಪಾದಯಾತ್ರೆಗೆ ಸಿದ್ದತೆ: ರಾಮನಗರಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೇ ರಾಜ್ಯ ಸರ್ಕಾರ ಯಾತ್ರೆಗೆ ನಿರ್ಬಂಧ ಹೇರಿದೆ. ಈ ಸಂಬಂಧ ಬುಧವಾರ ರಾತ್ರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಪಾದಯಾತ್ರೆಯಲ್ಲಿ ವಾಹನ ಸಂಚಾರ ಹಾಗೂ ಜನರು ಪಾಲ್ಗೊಳ್ಳುವುದನ್ನು ತತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.