Advertisement
ಪ್ರಕರಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಆರೋಪಿ ಎ1 ಎಂದು ನಮೂದಿಸಿದ್ದು, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿ ಎ2, ಜೆಡಿಎಸ್ ಮುಖಂಡ ಸುರೇಶ್ ಬಾಬ ಆರೋಪಿ ಎ3 ಎಂದು ಎಫ್ ಐಆರ್ ನಲ್ಲಿ ಬಿಎನ್ ಎಸ್ ಸೆಕ್ಷನ್ 224ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Related Articles
Advertisement
ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇರೆಗೆ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್ ಐಟಿ ಎಡಿಜಿಪಿ ಚಂದ್ರಶೇಖರ್ ಗವರ್ನರ್ ಗೆಹ್ಲೋಟ್ ಗೆ ಪತ್ರ ಬರೆದಿದ್ದರು.
ಈ ಪತ್ರದ ಮಾಹಿತಿ ಸೋರಿಕೆಯಾದ ನಂತರ ಕುಮಾರಸ್ವಾಮಿ, ಎಡಿಜಿಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಅಧಿಕಾರಿ ಯಾವ ಹಿನ್ನೆಲೆಯಿಂದ ಬಂದವರು, ನಾನು ಪ್ರಕರಣದಲ್ಲಿ ಜಾಮೀನು ತಗೊಂಡಿದ್ದೇನೆ, ಆದರೆ ತನಿಖೆ ಮಾಡಬೇಡಿ ಎಂದು ಹೇಳಿಲ್ಲ. ನೀವು ಏನ್ ಮಾಡಿದ್ದೀರಿ? ನಿಮ್ಮ ವಿರುದ್ಧವೇ ಕೇಸ್ ಇದೆ, ಆರೋಪಿ ನಂ2 ಹೈಕೋರ್ಟ್ ನಲ್ಲಿ ಅಧಿಕಾರಿ ತಡೆಯಾಜ್ಞೆ ತಗೊಂಡಿದ್ದಾರೆ ಎಂದು ತಿರುಗೇಟು ನೀಡಿದ್ದರು.
ಇದಕ್ಕೆ ಎಡಿಜಿಪಿ ಚಂದ್ರಶೇಖರ್, ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ, ಹಂದಿಗಳ ಜತೆ ಜಗಳಕ್ಕೆ ಇಳಿದರೆ ನಾವು ಗಲೀಜಾಗುತ್ತೇವೆ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ ಎಂದು ಪತ್ರದಲ್ಲಿ ಜಾರ್ಜ್ ಬರ್ನಾಡ್ ಶಾ ಅವರ ಹೇಳಿಕೆ ಉಲ್ಲೇಖಿಸಿದ್ದರು. ನಂತರ ಎಡಿಜಿಪಿ ಚಂದ್ರಶೇಖರ್ ಅವರು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.