Advertisement
ಈ ಅರ್ಜಿಯು ನ್ಯಾ| ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಆದಿತ್ಯ ಆಳ್ವ ವಿರುದ್ಧದ ಪ್ರಕರಣ ತನಿಖಾ ಹಂತದಲ್ಲಿದ್ದು, ಎಫ್ಐಆರ್ ರದ್ದತಿಗೆ ಅರ್ಜಿ ಸಲ್ಲಿಸಿರುವುದು ಸರಿಯಲ್ಲ ಎಂದು ನ್ಯಾಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ಸಹೋದರಿ ಪ್ರಿಯಾಂಕಾಗೆ ಮತ್ತೂಂದು ನೋಟಿಸ್
ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿ, ಆರೋಪಿ ಆದಿತ್ಯ ಆಳ್ವ ಸಹೋದರಿ ಪ್ರಿಯಾಂಕಾ ಆಳ್ವ ಅವರಿಗೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮತ್ತೂಂದು ನೋಟಿಸ್ ಜಾರಿ ಮಾಡಿ ದ್ದಾರೆ. ಶುಕ್ರವಾರ ಮಧ್ಯಾಹ್ನ ಖುದ್ದು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಲಾಗಿತ್ತಾದರೂ ಮಳೆ ಹಾಗೂ ಇತರ ಕಾರಣ ನೀಡಿ ಗೈರಾಗಿದ್ದರು. ಈ ಸಂಬಂಧ ಅ.20ರಂದು ಖುದ್ದು ಹಾಜರಾಗಲೇಬೇಕು ಎಂದು ವಾಟ್ಸಾಪ್ ಮೂಲಕ ಮತ್ತೂಂದು ನೋಟಿಸ್ ನೀಡಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
Related Articles
ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸಿಸಿಬಿಗೆ ನೋಟಿಸ್ ಜಾರಿಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾ| ಬಿ.ಎ ಪಾಟೀಲ್ ಅವರಿದ್ದ ನ್ಯಾಯಪೀಠ, ಸಿಸಿಬಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಅ.23ಕ್ಕೆ ಮುಂದೂಡಿತು.
Advertisement