ಈ ಮಧ್ಯೆ ಪ್ರಕರಣದ ಆರೋಪ ಪಟ್ಟಿ (ಚಾರ್ಜ್ ಶೀಟ್) ತಯಾರಾಗಿದ್ದು, ಅದಕ್ಕೆ ಜಿಲ್ಲಾಧಿಕಾರಿಗಳ ಅನುಮತಿ ಲಭಿಸಿದೆ. ರಾಜ್ಯ ಸರಕಾರದ ಅನುಮತಿ ಮಾತ್ರ ಬಾಕಿ ಉಳಿದಿದೆ.
Advertisement
ಬೆಂಗಳೂರಿಗೆ ಕರೆದೊಯ್ಯಬೇಕು ಬ್ರೈನ್ ಮ್ಯಾಪಿಂಗ್ ಮಾಡಿಸಲು ಆರೋಪಿ ಆದಿತ್ಯ ರಾವ್‌ನನ್ನು ಬೆಂಗಳೂರಿಗೆ ಕರೆದೊಯ್ಯಬೇಕಾಗಿದೆ. ಆರೋಪ ಪಟ್ಟಿಗೆ ಸರಕಾರದ ಅನುಮತಿ ಪಡೆದುಕೊಳ್ಳಲು ಬೆಂಗಳೂರಿಗೆ ಹೋಗಬೇಕಿದೆ. ಆದರೆ, ಪ್ರಸ್ತುತ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಲಾಕ್‌ಡೌನ್ ಘೋಷಿಸಿರುವುದರಿಂದ ಈ ಎರಡು ಕೆಲಸಗಳು ವಿಳಂಬವಾಗಿವೆ. ಈ ಹಿನ್ನೆಲೆಯಲ್ಲಿ ಆರೋಪ ಪಟ್ಟಿ ಸಲ್ಲಿಕೆಗೆ ನಿಗದಿ ಪಡಿಸಿರುವ ಅವಧಿಯನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಲಾಕ್‌ಡೌನ್ ತೆರವುಗೊಂಡ ಬಳಿಕ ಆರೋಪಿಯ ಬ್ರೈನ್ ಮ್ಯಾಪಿಂಗ್ ಹಾಗೂ ಆರೋಪ ಪಟ್ಟಿಗೆ ಸರಕಾರದ ಅನುಮತಿ ಪಡೆದು ಅದನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಮೂಲಗಳು ವಿವರಿಸಿವೆ.