Advertisement
ಚಿತ್ರದ ಬಗ್ಗೆ ಮಾತನಾಡಿದ ನಟ ಆದಿತ್ಯ, “ಈ ಹಿಂದೆ ಎಸ್. ನಾರಾಯಣ್ ಅವರ ಜೊತೆಗೆ ನಿರ್ಮಾಪಕನಾಗಿ ಕೆಲಸ ಮಾಡಿದ್ದೆ. ಅವರ ಕೆಲಸವನ್ನು ಹತ್ತಿರದಿಂದ ನೋಡಿದ್ದೆ. ಆದರೆ ಅವರ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿರಲಿಲ್ಲ. ಈ ಸಿನಿಮಾದಲ್ಲಿ ಮೊದಲ ಬಾರಿಗೆ ಎಸ್. ನಾರಾಯಣ್ ನಿರ್ದೇಶನದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತು. ಕಥೆ, ಪಾತ್ರ ಏನೂ ಕೇಳದೆಈಸಿನಿಮಾ ಒಪ್ಪಿಕೊಂಡೆ. ಅಂದುಕೊಂಡಂತೆ ಸಿನಿಮಾ ಚೆನ್ನಾಗಿ ಬಂದಿದೆ. ತಂಡದಲ್ಲಿ ಪ್ರತಿಯೊಬ್ಬರೂ ತುಂಬ ಚೆನ್ನಾಗಿ ತಮ್ಮಕೆಲಸ ನಿರ್ವಹಿಸಿದ್ದಾರೆ’ ಎಂದು ಚಿತ್ರೀಕರಣದ ಅನುಭವ ಹಂಚಿಕೊಂಡರು.
Related Articles
Advertisement
ಚಿತ್ರೀಕರಣದ ಬಗ್ಗೆ ಮಾತನಾಡಿದ ನಿರ್ದೇಶಕ ಎಸ್. ನಾರಾಯಣ್, “ಕಳೆದ ವರ್ಷ ಆಗಸ್ಟ್ 5ರಂದು ಸಿನಿಮಾದ ಸ್ಕ್ರಿಪ್ಟ್ ಪೂಜೆ ಮಾಡುವ ಮೂಲಕ “5ಡಿ’ ಸಿನಿಮಾದ ಕೆಲಸ ಶುರು ಮಾಡಿದ್ದೆವು. ಇದೇ ವರ್ಷ ಜ. 1ರಿಂದ ಸಿನಿಮಾದ ಶೂಟಿಂಗ್ ಶುರುವಾಗಿತ್ತು. ಸರಿಯಾಗಿ ಒಂದು ವರ್ಷದೊಳಗೆ ಕುಂಬಳಕಾಯಿ ಒಡೆದು ಸಿನಿಮಾದ ಶೂಟಿಂಗ್ ಮುಗಿಸಿದ್ದೇವೆ. ಕೊರೊನಾ ಲಾಕ್‌ಡೌನ್ ಇಲ್ಲದಿದ್ದರೆ, ಇಷ್ಟೊತ್ತಿಗಾಗಲೇ ನಮ್ಮ ಸಿನಿಮಾ ರಿಲೀಸ್ ಆಗಬೇಕಿತ್ತು. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಶುರು ಮಾಡಿದ್ದು, ಆದಷ್ಟು ಬೇಗ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ’ ಎಂದರು.
ಕಲಾವಿದರಾದ ಜ್ಯೋತಿ ರೈ, ರಾಜೇಶ್ ರಾವ್, ಆಕಾಶ್, ರವಿಕುಮಾರ್, ಚಿತ್ರದ ನಿರ್ಮಾಪಕ ಸ್ವಾತಿ ಕುಮಾರ್, ಛಾಯಾಗ್ರಹಕ ಕುಮಾರ್, ನೃತ್ಯ ನಿರ್ದೇಶಕ ಮಾಲೂರು ಶ್ರೀನಿವಾಸ್ ಸೇರಿದಂತೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು”5ಡಿ’ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು.