ಅಯೋಧ್ಯೆ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಗುರುವಾರದ ಅಯೋಧ್ಯೆ ಭೇಟಿ ಪ್ರತಿಕೂಲ ಹವಾಮಾನದಿಂದಾಗಿ ರದ್ದುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಪೂರ್ವಭಾವಿ ಸಿದ್ಧತೆಗಳ ಅವಲೋಕನಕ್ಕಾಗಿ ಯೋಗಿ ಆದಿತ್ಯನಾಥ್ ಅವರು ಆಗಮಿಸಬೇಕಿತ್ತು. ಮೊದಲು ಹನುಮಾನ್‌ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ರಾಮಲಲ್ಲಾ ದರ್ಶನಕ್ಕೆ ತೆರಳಲು ಮತ್ತು ರಾಮ ಮಂದಿರದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಲು ನಿರ್ಧರಿಸಲಾಗಿ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಇದನ್ನೂ ಓದಿ: Ayodhya; ಅಯೋಧ್ಯೆಯಲ್ಲಿ ಭದ್ರತೆ ಹೆಚ್ಚಳ: ಕಾಮಗಾರಿಯಲ್ಲಿ ಯಾವುದೇ ತರಾತುರಿಯಲ್ಲ
“ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಅಯೋಧ್ಯೆಗೆ ಭೇಟಿ ನೀಡಬೇಕಿತ್ತು ಆದರೆ ಮಂಜು ಮುಸುಕಿದ ವಾತಾವರಣದ ಕಾರಣದಿಂದಾಗಿ ಅವರು ಅಲ್ಲಿಗೆ ಹೋಗಲು ಸಾಧ್ಯವಾಗಲಿಲ್ಲ” ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಅಯೋಧ್ಯೆ ಪುನರಾಭಿವೃದ್ಧಿ ರೈಲು ನಿಲ್ದಾಣ ಮತ್ತು ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ಬೃಹತ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜನವರಿ 22 ರಂದು ರಾಮ ಮಂದಿರದ ಮಹಾಮಸ್ತಕಾಭಿಷೇಕ ಸಮಾರಂಭ ನಡೆಯಲಿದ್ದು, ಅದರಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.