Advertisement

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

03:01 PM Apr 16, 2024 | Team Udayavani |

ಆದಿತ್ಯ ನಾಯಕರಾಗಿ ನಟಿಸಿರುವ “ಕಾಂಗರೂ’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್‌ ಈ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರ ಮೇ 3ರಂದು ತೆರೆಕಾಣುತ್ತಿದೆ.

Advertisement

“ನಾವು ಆರು ಜನ ಸ್ನೇಹಿತರು ಸೇರಿ ಈ ಸಿನಿಮಾ ನಿರ್ಮಿಸಿದ್ದೇವೆ. ನಾವೆಲ್ಲಾ ಸಣ್ಣ ಕೈಗಾರಿಕೋದ್ಯಮಿಗಳು. ಪೀಣ್ಯದಲ್ಲಿ ನಮ್ಮ ಫ್ಯಾಕ್ಟರಿ ಇದೆ. ಸಿನಿಮಾ ರಂಗ ನಮಗೆ ಹೊಸತು. ಸ್ನೇಹಿತರ ಮೂಲಕ ಪರಿಚಿತರಾದ ನಿರ್ದೇಶಕ ಕಿಶೋರ್‌ರ್‌ ಅವರು ಈ ಚಿತ್ರದ ಕಥೆ ಹೇಳಿದ ರೀತಿ ನಮಗೆ ಇಷ್ಟವಾಯಿತು. ಚಿತ್ರ ನಿರ್ಮಾಣಕ್ಕೆ ಮುಂದಾದೆವು. ಮೇ 3 ರಂದು ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು

ನಿರ್ಮಾಪಕರಲ್ಲೊಬ್ಬರಾದ ಚೆನ್ನಕೇಶವ ಬಿ.ಸಿ. ನಿರ್ದೇಶಕ ಕಿಶೋರ್‌ ಮಾತನಾಡಿ, “ಇದೊಂದು ಸಸ್ಪೆನ್ಸ್‌ – ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಚಿತ್ರ. ಕನ್ನಡದಲ್ಲಿ ಸಾಕಷ್ಟು ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರಗಳು ಬಂದಿವೆಯಾದರೂ, ನಮ್ಮ ಚಿತ್ರ ಸ್ವಲ್ಪ ವಿಭಿನ್ನ. ಫ್ಯಾಮಿಲಿ ಆಡಿಯನ್ಸ್‌ಗಾಗಿಯೇ ಮಾಡಿರುವ ಕಥೆ ಇದು. ಇನ್ನು ಕಾಂಗರೂ ಮೃದು ಸ್ವಭಾವದ ಪ್ರಾಣಿ. ಯಾರ ತಂಟೆಗೂ ಹೋಗುವುದಿಲ್ಲ. ಆದರೆ ತನ್ನ ಮಕ್ಕಳ ತಂಟೆಗೆ ಬಂದರೆ ಅದು ಯಾರನ್ನು ಬಿಡುವುದಿಲ್ಲ. ಇದೇ ಚಿತ್ರದ ಕಥಾಸಾರಾಂಶ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಮ್ಮ ಚಿತ್ರ ನಿರ್ಮಾಣವಾಗಿದೆ. ನಾಯಕ ಆದಿತ್ಯ, ನಾಯಕಿ ರಂಜನಿ ರಾಘವನ್‌ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ. ಸಾಧುಕೋಕಿಲರ ಸಂಗೀತ ನಿರ್ದೇಶನ ಹಾಗೂ ಉದಯಲೀಲಾ ಅವರ ಛಾಯಾಗ್ರಹಣ ಚಿತ್ರದ ಹೈಲೆಟ್‌’ ಎಂದರು.

ನಾಯಕ ಆದಿತ್ಯ ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಅದಕ್ಕೆ ಕಾರಣ ಕಥೆ. “ನಿರ್ದೇಶಕ ಕಿಶೋರ್‌ ಕಥೆ ಕೇಳಿ ಎಂದರು. ನಾನು ಸರಿ ಎಂದೆ. ಆನಂತರ

ಕೇಳುವುದು ಬೇಡ ಸಿನಿಮಾನೇ ತೋರಿಸುತ್ತೇನೆ ಎಂದರು. ನನಗೆ ಆಶ್ಚರ್ಯವಾಯಿತು. ಚಿತ್ರದ ಕಥೆಯನ್ನು ಅನಿಮೇಶನ್‌ ಮೂಲಕ ತೋರಿಸಿದ ಪ್ರಥಮ ನಿರ್ದೇಶಕ ಇವರೇ ಇರಬಹುದು. ನಾನು ಈ ಚಿತ್ರದಲ್ಲಿ ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರ ಸೇರಿದಂತೆ ಎಲ್ಲಾ ಕನ್ನಡ ಚಿತ್ರಗಳನ್ನು ಚಿತ್ರಮಂದಿರಗಳಲ್ಲೇ ನೋಡಿ’ ಎನ್ನುವುದು ಆದಿತ್ಯ ಮಾತು.

Advertisement

ಚಿತ್ರದಲ್ಲಿ ರಂಜನಿ ರಾಘವನ್‌ ನಾಯಕಿ. “ನಾನು ಈ ಚಿತ್ರದಲ್ಲಿ ಮನೋವೈದ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇದು ನಾನು ನಾಯಕಿಯಾಗಿ ನಟಿಸಿರುವ ಐದನೇ ಚಿತ್ರ’ ಎಂದರು.

ಚಿತ್ರದಲ್ಲಿ ನಟಿಸಿರುವ ನಾಗೇಂದ್ರ ಅರಸ್‌, ಅಶ್ವಿ‌ನ್‌ ಹಾಸನ್‌, ಶುಭಲಕ್ಷ್ಮೀ, ಗೌತಮ್‌ ಮುಂತಾದವರು ಕಾಂಗರೂ ಚಿತ್ರದ ಕುರಿತು ಮಾತನಾಡಿದರು.ಆರೋಹ ಪ್ರೊಡಕ್ಷನ್ಸ್‌ ಬ್ಯಾನರ್‌ನಡಿ ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್‌ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ.ಜಿ. ಆರ್‌. ಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next