Advertisement

Adiudupi: ಎಪಿಎಂಸಿ ಮಾರುಕಟ್ಟೆಗೆ ದಾಳಿ: 12 ಟನ್‌ ಚೀನ ಬೆಳ್ಳುಳ್ಳಿ ವಶಕ್ಕೆ

01:01 AM Oct 03, 2024 | Team Udayavani |

ಉಡುಪಿ:ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯಲ್ಲಿ ರಾಸಾಯನಿಕ ಮಿಶ್ರಿತ ಚೀನ ಬೆಳ್ಳುಳ್ಳಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಮೇರೆಗೆ ನಗರಸಭೆ ಪೌರಾಯುಕ್ತರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Advertisement

ವ್ಯಾಪಾರಸ್ಥರಿಂದ ಮಾಹಿತಿ ಪಡೆದು ಮಾರಾಟಕ್ಕೆ ತಂದಿದ್ದ ರಾಸಾಯನಿಕ ಮಿಶ್ರಿತ ಚೀನ ಬೆಳ್ಳುಳ್ಳಿ ಎಂಬ ಶಂಕೆಯ ಮೇರೆಗೆ ಸುಮಾರು 12 ಟನ್‌ ಬೆಳ್ಳುಳ್ಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

“ಎಪಿಎಂಸಿ ಮಾರುಕಟ್ಟೆಗೆ ಚೀನಾದ ಬೆಳ್ಳುಳ್ಳಿ ಬಂದಿದೆ ಎಂಬ ಮಾಹಿತಿ ಪರಿಶೀಲನೆ ಮಾಡಿದ್ದೇವೆ. ಇಲ್ಲಿಗೆ ಬಂದ ಎಲ್ಲ ಬೆಳ್ಳುಳ್ಳಿಗಳನ್ನು ವಶಪಡಿಸಿಕೊಂಡು ಅದರ ಮಾದರಿಯನ್ನು ಮಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಅನಂತರ ಮುಂದಿನ ಕ್ರಮ ವಹಿಸಲಾಗುವುದು.

ಉಡುಪಿ ನಗರಸಭೆ ವ್ಯಾಪ್ತಿಯ ಮಾರುಕಟ್ಟೆ, ಎಪಿಎಂಸಿಯಲ್ಲಿ ಯಾವುದೇ ಕಾರಣಕ್ಕೂ ಇಂತಹ ರಾಸಾಯನಿಕ ಮಿಶ್ರಿತ ಆಹಾರ ಪದಾರ್ಥ, ತರಕಾರಿ, ಬೆಳ್ಳುಳ್ಳಿ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ. ಎಪಿಎಂಸಿ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next