Advertisement

Session: ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

09:58 PM Feb 29, 2024 | Team Udayavani |

ಬೆಂಗಳೂರು: ಕಳೆದ 13 ದಿನಗಳಿಂದ ನಡೆಯುತ್ತಿದ್ದ ವಿಧಾನ ಮಂಡಲ ಕಲಾಪವು ವಿಪಕ್ಷಗಳ ಅನುಪಸ್ಥಿತಿಯಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಯಿತು.

Advertisement

ಫೆ.12ರಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಭಾಷಣ ಮಾಡುವ ಮೂಲಕ ಕಲಾಪಕ್ಕೆ ಚಾಲನೆ ಸಿಕ್ಕಿತ್ತು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಬೆಂಬಲಿಸಿ 12 ಸದಸ್ಯರು 10 ಗಂಟೆಗಳ ಕಾಲ ಚರ್ಚಿಸಿದ್ದಾರೆ. ಫೆ.16ರಂದು ಸಿಎಂ ಸಿದ್ದರಾಮಯ್ಯ 3.71 ಲಕ್ಷ ಕೋಟಿ ರೂ.ಗಳ ಬಜೆಟ್‌ ಮಂಡಿಸಿದರು. ಬಜೆಟ್‌ ಮೇಲಿನ ಚರ್ಚೆಯಲ್ಲಿ 25 ಶಾಸಕರು 8 ಗಂಟೆಗಳ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಇದೆಲ್ಲದರ ಮಧ್ಯೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಮಸೂದೆಯನ್ನು ವಿಧಾನಸಭೆಯಲ್ಲಿ ಮರುಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಯಿತು. ನಾಮಫ‌ಲಕಗಳಲ್ಲಿ ಶೇ.60ರಷ್ಟು ಕನ್ನಡ ಪ್ರದರ್ಶನ, ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಮೀಸಲಾತಿ ನೀಡುವ ಮಸೂದೆ ಸಹಿತ  ಒಟ್ಟು 26 ಮಸೂದೆಗಳನ್ನು ಮಂಡಿಸಿ, ಅನುಮೋದನೆ ಪಡೆದುಕೊಳ್ಳಲಾಯಿತು. ಮೋಡ ಬಿತ್ತನೆ ಕುರಿತಂತೆ ಕಾಂಗ್ರೆಸ್‌ನ ಪ್ರಕಾಶ್‌ ಕೋಳಿವಾಡ ಮಂಡಿಸಿದ್ದ ಖಾಸಗಿ ಮಸೂದೆಯನ್ನು ರಾಜ್ಯಪಾಲರಿಗೆ ರವಾನಿಸಿದ್ದು, ಅನುಮತಿ ಸಿಕ್ಕಿದರಷ್ಟೇ ಮುಂದಿನ ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next