Advertisement

ಬ್ಯಾಂಕ್‌ ಖಾತೆಗೆ ಆಧಾರ್‌ ಸಂಖ್ಯೆ ಜೋಡಿಸಲಿ

11:02 AM Jan 16, 2019 | Team Udayavani |

ಯಾದಗಿರಿ: ಮೆಟ್ರಿಕ್‌ ಪೂರ್ವ ವಿದ್ಯಾರ್ಥಿಗಳ ಶಿಷ್ಯ ವೇತನಕ್ಕಾಗಿ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಸಂಖ್ಯೆ ಜೋಡಣೆ ಕಾರ್ಯವನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಜಿಪಂ ಸಿಇಒ ಕವಿತಾ ಎಸ್‌. ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಡಿಡಿಪಿಐ, ಡಿವೈಎಸ್‌ಪಿ, ಬಿ.ಇ.ಒ, ಬಿ.ಆರ್‌.ಸಿ, ಸಿ.ಆರ್‌.ಪಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಲೀಡ್‌ ಬ್ಯಾಂಕ್‌ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ 2018-19ನೇ ಸಾಲಿನ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿಗಳ ಶಿಷ್ಯ ವೇತನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಷ್ಯವೇತನಕ್ಕಾಗಿ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಜೋಡಣೆ ಕಾರ್ಯದಲ್ಲಿ ಜಿಲ್ಲೆಯ ಪ್ರಗತಿಯು ಶೇ. 44.27ರಷ್ಟು ಇದೆ. ಇನ್ನೆರಡು ದಿನಗಳಲ್ಲಿ ಪ್ರತಿಶತ ಪ್ರಗತಿಯನ್ನು ಸಾಧಿಸಲು ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯಪ್ರವೃತ್ತರಾಗಬೇಕು ಎಂದು ನಿರ್ದೇಶಿಸಿದರು.

ಮುಖ್ಯಗುರುಗಳು ತಮ್ಮ ಶಾಲೆಯಲ್ಲಿ ಈಗಾಗಲೇ ಆನ್‌ಲೈನ್‌ನಲ್ಲಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗುವಂತೆ ಆಧಾರ್‌ ಸಂಖ್ಯೆ ಜೋಡಣೆ ಮಾಡಿಸಬೇಕು. ಅವರ ಬ್ಯಾಂಕ್‌ ಖಾತೆಯನ್ನು ಮುತುವರ್ಜಿ ವಹಿಸಿ ಚಾಲ್ತಿ ಮಾಡಿಸಬೇಕು.

ಆಯಾ ವಲಯದ ಸಿ.ಆರ್‌.ಪಿ ಗಳವರು ತಮ್ಮ ಅಧಿಧೀನದಲ್ಲಿ ಬರುವ ಎಲ್ಲಾ ಶಾಲೆಗಳ ಮುಖ್ಯಶಿಕ್ಷಕರ ಮೂಲಕ ಆಧಾರ್‌ ಲಿಂಕ್‌ ಮತ್ತು ಬ್ಯಾಂಕ್‌ ಖಾತೆ ಚಾಲ್ತಿ ಮಾಡಿಸಿ, ಪ್ರತಿದಿನ ನಿಗದಿತ ನಮೂನೆಯಲ್ಲಿ ಮಾಹಿತಿ ಸಲ್ಲಿಸುವಂತೆ ಸೂಚಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್‌ ಬಿರಾದಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಾದ ಪೂರ್ಣಿಮಾ ಚೂರಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next